ಹಾರಿಸಿದ 'ಸಿ.ಡಿ'ಗುಂಡಿನ ಪರಿಣಾಮ ಏನಾಯ್ತು?: ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ!

ಬೆಂಗಳೂರು: ಮಾಜಿ ಸಚಿವ ಸಿ.ಡಿ ಪ್ರಕರಣದ ಕುರಿತು ಪಕ್ಷದ ಮುಂದಿನ ನಡೆ ಕುರಿತು ಚರ್ಚಿಸಲು, ವಿಪಕ್ಷ ನಾಯಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ವಿಧಾನಸಭೆಯಲ್ಲಿ ರಮೇಶ್ ಜಾರಕಿಹೊಳಿ‌ ಸಿ.ಡಿ ಪ್ರಕರಣ ಹಾಗೂ ಆರು ಮಂದಿ ಸಚಿವರು ನ್ಯಾಯಾಲಯದ ತಡೆಯಾಜ್ಞೆ ಪಡೆದುಕೊಂಡ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಸಂತ್ರಸ್ತೆಯ ವಿಡಿಯೋ ಆರೋಪ ಆಧರಿಸಿ ಅತ್ಯಾಚಾರ ಪ್ರಕರಣ ದಾಖಲು ಮಾಡುವಂತೆ ಸಿದ್ದರಾಮಯ್ಯ ಆಗ್ರಹಿಸಿದ್ದರು. ಅಲ್ಲದೆ ಸರ್ಕಾರದ ಉತ್ತರಕ್ಕೆ ತೃಪ್ತರಾಗದೆ ಸದನದ ಬಾವಿಗೆ ಇಳಿದು ಧರಣಿ ನಡೆಸಿದ್ದರು. ಇದೀಗ ಈ ವಿಚಾರವಾಗಿ ಪಕ್ಷದ ಮುಂದಿನ ನಡೆಯ ಬಗ್ಗೆ ಚರ್ಚೆ ನಡೆಸಲು ಸಿದ್ದರಾಮಯ್ಯ ಸಭೆ ಕರೆಯುವ ನಿರ್ಣಯವನ್ನು ಕೈಗೊಂಡಿದ್ದಾರೆ. ರಮೇಶ್ ಜಾರಕಿಹೊಳಿ‌ ಪ್ರಕರಣದಲ್ಲಿ ಎಸ್‌ಐಟಿ ತನಿಖೆಯಿಂದ ನ್ಯಾಯ ಸಿಗುವುದಿಲ್ಲ. ಈ ನಿಟ್ಟಿನಲ್ಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕು ಹಾಗೂ ನ್ಯಾಯಾಲಯದ ಮೊರೆ ಹೋದ ಆರು ಮಂದಿ ಸದಸ್ಯರು ರಾಜೀನಾಮೆ ನೀಡಬೇಕು ಎಂಬುದು ಕಾಂಗ್ರೆಸ್ ವಾದವಾಗಿದೆ. ಆದರೆ ಸರ್ಕಾರ ಈ ಪ್ರಕರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿದೆ ಎಂದು ಉತ್ತರ ಕೊಟ್ಟಿದೆ.‌ ನಿನ್ನೆ(ಮಾ.22-ಸೋಮವಾರ) ವಿಧಾನಸಭೆಯಲ್ಲಿ ಈ ಕುರಿತಾಗಿ ಉತ್ತರ ನೀಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ತನಿಖೆಯ ಪ್ರಗತಿಯ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಇದನ್ನು ಒಪ್ಪದ ಕಾಂಗ್ರೆಸ್ ಸದಸ್ಯರು ಸದನದ ಬಾವಿಗೆ ಇಳಿದು ಧರಣಿ ನಡೆಸಿದ್ದರು. ಧರಣಿ ತೀವ್ರಗೊಂಡ ಹಿನ್ನೆಲೆಯಲ್ಲಿ ಸದನವನ್ನು ಮುಂದೂಡಲಾಗಿತ್ತು. ಆದರೆ ಇದೀಗ ಧರಣಿಯನ್ನು ಮುಂದುವರಿಸಬೇಕೋ ಬೇಡವೋ ಎಂಬ ನಿಟ್ಟಿನಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಜೊತೆಗೆ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಈ ಕುರಿತಾದ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ವಿಧಾನಸೌಧದಲ್ಲಿರುವ ಪ್ರತಿ ಪಕ್ಷದ ನಾಯಕರ ಕೊಠಡಿಯಲ್ಲಿ ಈ ಸಭೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಹಿರಿಯ ಮುಖಂಡರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.


from India & World News in Kannada | VK Polls https://ift.tt/393amJO

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...