ಜಪ್ಪಿನಮೊಗರು: ಅತೀವೇಗದಿಂದ ಕಾರ್‌ ಚಲಾಯಿಸಿ ಆಟೋಗೆ ಡಿಕ್ಕಿ; ಆಟೋ ಡ್ರೈವರ್ ಸ್ಥಳದಲ್ಲೇ ಸಾವು!

ತೊಕ್ಕೊಟ್ಟು: ಕಾರ್‌ ಚಾಲಕನ ಅಜಾಗರೂಕತೆಯ ಚಾಲನೆಯ ಪರಿಣಾಮ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರು ನೇತ್ರಾವತಿ ಸೇತುವೆಯಲ್ಲಿ ಶನಿವಾರ ಬೆಳಗ್ಗೆ ಅತೀವೇಗದಿಂದ ಬರುತ್ತಿದ್ದ ಕಾರು ಚಾಲಕ ಮುಂದುಗಡೆ ಹೋಗುತ್ತಿದ್ದ ಆಟೋ ರಿಕ್ಷಾಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು, ಪರಿಣಾಮ ಎಡಭಾಗದಲ್ಲಿದ್ದ ಆಟೋ ರಿಕ್ಷಾ ಸೇತುವೆಯ ಮೇಲಿನ ರಕ್ಷಣಾ ಗೋಡೆಗೆ ಬಡಿದು ಆಟೋ ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಂಗಳೂರಿನಿಂದ ತೊಕ್ಕೊಟ್ಟಿಗೆ ಹೋಗುತ್ತಿದ್ದ ಆಟೋ ರಿಕ್ಷಾದ ಹಿಂಬದಿಯಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದ್ದು, ಕಾರು ಚಾಲಕನ ಮೇಲೆ ಆಕ್ರೋಶಗೊಂಡ ಸಾರ್ವಜನಿಕರು ಹಲ್ಲೆಗೆ ಮುಂದಾಗಿದ್ದಾಗ, ತಕ್ಷಣ ದಕ್ಷಿಣ ಸಂಚಾರಿ ಪೊಲೀಸರು ಆಗಮಿಸಿ ಜನರನ್ನು ಚದುರಿಸಿದ್ದಾರೆ. ಮೃತ ದೇಹವನ್ನು ವೆನ್ ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ. ಕೇರಳ ರಾಜ್ಯ ನೋಂದಣಿಯ ಕಾರು ಇದಾಗಿದ್ದು ಟೆಂಪೋಗೆ ಢಿಕ್ಕಿ ಹೊಡೆದು ಬಳಿಕ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


from India & World News in Kannada | VK Polls https://ift.tt/3rtDjoL

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...