ಕಾಂಗ್ರೆಸ್ ಕುಂಟು ನೆಪ: ಅಧಿವೇಶನ ಎದುರಿಸದವರಿಂದ ಸಿ.ಡಿ ಜಪ ಎಂದ ಬಿಎಸ್‌ವೈ!

ಬೆಂಗಳೂರು: ಮಾಜಿ ಸಚಿವ ಸಿ.ಡಿ ಪ್ರಕರಣವನ್ನು ಮುಂದೆ ಮಾಡಿ, ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್‌ನ್ನು ಮುಖ್ಯಮಂತ್ರಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಧಾನ ಸೌಧದಲ್ಲಿ ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ ಸಿಎಂ ಬಿಎಸ್‌ವೈ, ಅಧಿವೇಶನ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರು ಕುಂಟು ನೆಪ ಹೇಳಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು. ರಮೇಶ್ ಜಾರಕಿಹೋಳಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ತನಿಖೆ ನಡೆಸಲು ಸರ್ಕಾರ ಎಲ್ಲಾ ಕ್ರಮ ಕೈಗೊಂಡಿದೆ. ಆದರೆ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಬೇರೆ ವಿಚಾರ ಸಿಗದೆ ಇರುವುದರಿಂದ ಕಾಂಗ್ರೆಸ್ ಸದಸ್ಯರು ಧರಣಿ ನಡೆಸುತ್ತಿದ್ದಾರೆ ಎಂದು ಯಡಿಯೂರಪ್ಪ ತೀವ್ರ ವಾಗ್ದಾಳಿ ನಡೆಸಿದರು. ಸಿ.ಡಿ ಪ್ರಕರಣದ ಯುವತಿ ಸಿಗುತ್ತಿಲ್ಲ. ಆಕೆ ಸಿಕ್ಕ ಮೇಲೆ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದು ಸಿಎಂ ಬಿಎಸ್‌ವೈ ಭರವಸೆ ನೀಡಿದರು. ನಾನು ನಿಮ್ಮೆಲ್ಲರ ಮಾರುಗಳನ್ನು ಆಲಿಸುತ್ತಿದ್ದೇನೆ. ಸುಸೂತ್ರವಾಗಿ ಕಲಾಪ ನಡೆಸಲು ಬಿಡಿ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕಾಂಗ್ರೆಸ್ ಸದಸ್ಯರಲ್ಲಿ ಮನವಿ ಮಾಡಿಕೊಂಡರು. ಸಿ.ಡಿ ಪ್ರಕರಣದ ತನಿಖೆಯನ್ನು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನಡೆಸಬೇಕು ಎಂದು ಒತ್ತಾಯಿಸುತ್ತಿರುವ ಕಾಂಗ್ರೆಸ್, ಇಂದೂ(ಮಾ.23-ಮಂಗಳವಾರ) ಕೂಡ ಉಭಯ ಸದನಗಳಲ್ಲಿ ಧರಣಿ ಮುಂದುವರೆಸಲು ನಿರ್ಧರಿಸಿದೆ. ಒಟ್ಟಿನಲ್ಲಿ ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣ ಇಂದೂ ಕೂಡ ಸದನದಲ್ಲಿ ಸದ್ದು ಮಾಡಲಿರುವುದು ಖಚಿತವಾಗಿದ್ದು, ಕಾಂಗ್ರೆಸ್ ಧರಣಿ ತಂತ್ರಕ್ಕೆ ಬಿಎಸ್‌ವೈ ಸರ್ಕಾರ ಏನು ಪ್ರತಿತಂತ್ರ ಹೆಣೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.


from India & World News in Kannada | VK Polls https://ift.tt/3d0Kgbp

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...