ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಸುಟ್ಟು ಕರಕಲಾಯ್ತು ಒಂದು ಎಕರೆ ಕಾಫಿ ತೋಟ..!

ಚಿಕ್ಕಮಗಳೂರು: ಸಮೀಪದ ಬಸರವಳ್ಳಿ ಗ್ರಾಮದ ನಾಗರತ್ನಮ್ಮ ಅವರಿಗೆ ಸೇರಿದ ಸುಮಾರು 1 ಎಕರೆ ಕಾಫಿ ತೋಟ ಬುಧವಾರ ವಿದ್ಯುತ್‌ ಶಾರ್ಟ್‌ ಸರ್ಕೂಟ್‌ನಿಂದ ಸಂಪೂರ್ಣ ಸುಟ್ಟುಹೋಗಿದೆ. ನಾಗರತ್ನಮ್ಮ ಅವರಿಗೆ ಸೇರಿದ ಕಾಫಿ ತೋಟದ ಮೇಲೆ ಹೈ ವೋಲ್ಟೇಜ್‌ ವಿದ್ಯುತ್‌ ತಂತಿಗಳು (11ಕೆ.ವಿ) ಹಾದು ಹೋಗಿದ್ದು, ಬುಧವಾರ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ವಿದ್ಯುತ್‌ ಕಂಬದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ತೋಟಕ್ಕೆ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ತೋಟದಲ್ಲಿದ್ದ ರೋಬಸ್ಟಾ ಕಾಫಿ ಗಿಡಗಳು, ಅಡಕೆ, ಕಾಳು ಮೆಣಸು, ಬಾಳೆ ಸೇರಿ ಸುಮಾರು ಒಂದು ಲಕ್ಷ ರೂ. ಮೌಲ್ಯದ ಬೆಳೆ ಬೆಂಕಿಗೆ ಆಹುತಿಯಾಗಿದೆ. ಇವರ ಜಮೀನಿನ ಪಕ್ಕದಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರು ನಾಗರತ್ನ ಅವರಿಗೆ ಮಾಹಿತಿ ನೀಡಿದ್ದು, ಗ್ರಾಮದವರೆಲ್ಲಾ ಸೇರಿ ಬೆಂಕಿ ನಂದಿಸಿದ್ದಾರೆ. ಮೆಸ್ಕಾಂಗೆ ಮಾಹಿತಿ ನೀಡಿ ವಿದ್ಯುತ್‌ ಸಂಪರ್ಕ ಸ್ಥಗಿತಗೊಳಿಸಿದ್ದು, ಭಾರೀ ಅನಾಹುತ ತಪ್ಪಿದೆ. ಈ ಸಂಬಂಧ ಆಲ್ದೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಹಳೆಯ ವಿದ್ಯುತ್‌ ಲೈನ್‌ ಬದಲಾಯಿಸಲು ಆಗ್ರಹಶಂಕರ್‌ಫಾಲ್ಸ್‌ 11 ಕೆ.ವಿ. ವಿದ್ಯುತ್‌ ಲೈನ್‌ ಬಹಳ ಹಳೆಯದಾಗಿದ್ದು, ಈ ಲೈನ್‌ಗಳನ್ನು ಬದಲಾಯಿಸಬೇಕು. ಇಲ್ಲಿ ಪದೇ ಪದೇ ಅವಘಡಗಳು ನಡೆಯುತ್ತಿವೆ ಎಂದು ಗ್ರಾಮಸ್ಥರು ಹಲವು ಬಾರಿ ಮೆಸ್ಕಾಂಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದೇ ರೀತಿ ವಿದ್ಯುತ್‌ ತಂತಿಗಳು ತುಂಡಾಗಿ ಬಿದ್ದು ಹಲವು ಜಾನುವಾರುಗಳು ಮೃತಪಟ್ಟಿವೆ. ಈ ಬಗ್ಗೆ ಇಲಾಖೆ ಗಮನಕ್ಕೆ ತಂದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಕಳೆದ ವಾರ ಮೆಸ್ಕಾಂ ಜನ ಸಂಪರ್ಕ ಸಭೆಯಲ್ಲೂ ಸಹ ಈ ಬಗ್ಗೆ ಚರ್ಚೆಯಾಗಿದೆ. ಕೂಡಲೇ ಮೆಸ್ಕಾಂ ಕ್ರಮ ಕೈಗೊಳ್ಳಬೇಕು. ಹಳೆಯದಾಗಿರುವ ಲೈನ್‌ಗಳನ್ನು ಬದಲಾಯಿಸಬೇಕು ಎಂದು ಬಸರವಳ್ಳಿ ಗ್ರಾಮದ ರವಿ ಒತ್ತಾಯಿಸಿದ್ದಾರೆ.


from India & World News in Kannada | VK Polls https://ift.tt/3874NcX

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...