ಬಾಂಗ್ಲಾ ಪ್ರವಾಸಕ್ಕೆ ತೆರಳಿದ ಪ್ರಧಾನಿ: ಕೊರೊನಾ ಕಾಲದ ಮೊದ ವಿದೇಶ ಯಾತ್ರೆ!

ಹೊಸದಿಲ್ಲಿ: ಕೊರೊನಾ ಕಾಲದ ಮೊದಲ ವಿದೇಶ ಪ್ರವಾಸ ಕೈಗೊಂಡಿರುವ , ಬಾಂಗ್ಲಾದೇಶಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಈಗಾಗಲೇ ರಾಷ್ಟ್ರ ರಾಜಧಾನಿ ದೆಹಲಿಯಿಂದ ಬಾಂಗ್ಲಾ ರಾಜಧಾನಿ ಢಾಕಾಗೆ ಪ್ರಯಾಣ ಬೆಳೆಸಿರುವ ಪ್ರಧಾನಿ ಮೋದಿ, ಕೆಲವೇ ಕ್ಷಣಗಳಲ್ಲಿ ಢಾಕಾ ತಲುಪಲಿದ್ದಾರೆ. ಒಟ್ಟು ಎರಡು ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ, ರಾಷ್ಟ್ರೀಯ ಹುತಾತ್ಮರ ಸ್ಮಾರಕ ಮತ್ತು ರಾಷ್ಟ್ರೀಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಭಾರತ-ಬಾಂಗ್ಲಾ ನಡುವಿನ ರಾಜತಾಂತ್ರಿಕ ಹಾಗೂ ವಾಣಿಜ್ಯ ಸಂಬಂಧ ಸುಧಾರಣೆ ಈ ಪ್ರವಾಸದ ಪ್ರಮುಖ ಉದ್ದೇಶವಾಗಿದ್ದು, ಬಾಂಗ್ಲಾ ಪ್ರಧಾನಿ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸಲಿದ್ದಾರೆ. ಮೋದಿ-ಹಸೀನಾ ನಡುವಿನ ಮಾತುಕತೆ ವೇಳೆ ಸಾರಿಗೆ ಸಂಪರ್ಕ, ನೀರಿನ ನಿರ್ವಹಣೆ ಹಾಗೂ ವಾಣಿಜ್ಯಾಭಿವೃಧ್ಧಿ ಸಂಬಂಧಿತ ಚರ್ಚೆಗಳು ನಡೆಯಲಿವೆ ಎನ್ನಲಾಗಿದೆ. ಇನ್ನು ಮಾರಕ ಕೊರೊನಾ ವೈರಸ್ ಹಾವಳಿ ಆರಂಭವಾದಾಗಿನಿಂದ ವಿದೇಶ ಪ್ರವಾಸವನ್ನು ಮೊಟಕುಗೊಳಿಸಿದ್ದ ಪ್ರಧಾನಿ ಮೋದಿ, ಬರೋಬ್ಬರಿ ಒಂದು ವರ್ಷಕ್ಕೂ ಹೆಚ್ಚು ಅವಧಿಯ ಬಳಿಕ ವಿದೇಶ ಪ್ರವಾಸ ಕೈಗೊಂಡಿರುವುದು ವಿಶೇಷ.


from India & World News in Kannada | VK Polls https://ift.tt/3sjxVpn

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...