ಹುಡುಗರ ಜೊತೆ ಫೋನ್‌ನಲ್ಲಿ ಹೆಚ್ಚು ಮಾತನಾಡಬೇಡ ಅಂದಿದ್ದಕ್ಕೆ ಯುವತಿ ಆತ್ಮಹತ್ಯೆ!

: ಹುಡುಗರ ಜೊತೆ ಹೆಚ್ಚು ಮಾತನಾಡಬೇಡ ಎಂದು ತಾಯಿ ಬೈದಿದ್ದಕ್ಕೆ ಯುವತಿಯೊಬ್ಬಳು ಇಲಿ ಪಾಷಾಣ ಸೇವಿಸಿ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಸ್ನೇಹ (18) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿರುವ ಯುವತಿಯಾಗಿದ್ದು, ಯುವತಿ ಹೆಚ್ಚಾಗಿ ಫೋನ್‌ನಲ್ಲಿ ಮಾತನಾಡುತ್ತಿದ್ದಳು. ಇದನ್ನು ಗಮನಿಸಿದ ಆಕೆಯ ತಾಯಿ ಹುಡುಗರ ಜತೆ ಹೆಚ್ಚು ಮಾತನಾಡಬೇಡ ಎಂದು ಬುದ್ಧಿವಾದ ಹೇಳಿ ಗದರಿಸಿದ್ದರು. ಇದರಿಂದ ತಾಯಿಗೆ ಹೆದರಿಸಬೇಕು ಎಂದುಕೊಂಡು ಸ್ನೇಹ ಮಾ.3 ರಂದು ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಾ. 19ರಂದು ಮೃತಪಟ್ಟಿದ್ದಾಳೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


from India & World News in Kannada | VK Polls https://ift.tt/2NHGMlO

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...