ಮೈಸೂರಿನಲ್ಲಿ ಅಕ್ರಮ ಬಿಪಿಎಲ್‌ ಕಾರ್ಡ್‌ ಕಠಿಣ ಕ್ರಮಕ್ಕೆ ಇಲಾಖೆ ಸಜ್ಜು

ಐತಿಚಂಡ ರಮೇಶ್‌ ಉತ್ತಪ್ಪ ಮೈಸೂರು: ದ್ವಿಚಕ್ರವಾಹನ ಇದ್ದವರಿಗೆ ಹಾಗೂ ಟಿವಿ ಇದ್ದವರಿಗೆ ಪಡಿತರ ನಿಲ್ಲಿಸಲಾಗುವುದು ಎನ್ನುವ ಸಚಿವರ ಹೇಳಿಕೆ ವೈರಲ್‌ ಆಗಿ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆದರೂ ಸಾಕಷ್ಟು ಮಂದಿ ಸಿರಿವಂತರು ಅಕ್ರಮವಾಗಿ ಬಿಪಿಎಲ್‌ ಕಾರ್ಡ್‌ಗಳನ್ನು ಹೊಂದಿದ್ದು, ಹಿಂತಿರುಗಿಸದೆ ವಂಚನೆ ಮಾಡುತ್ತಿದ್ದಾರೆ. ಈಗಾಗಲೇ ಇಲಾಖೆಯ ಕೊನೆ ಎಚ್ಚರಿಕೆ ಮುಗಿದಿದ್ದು, ಕಠಿಣ ಕ್ರಮಕ್ಕೆ ಮುಂದಾಗಿದೆ. ಸರಕಾರದ ಸೂಚನೆ ಹಿನ್ನೆಲೆಯಲ್ಲಿ ಜನವರಿ ಹಾಗೂ ಫೆಬ್ರವರಿಯಲ್ಲಿ ನಡೆಸಿದ ತಪಾಸಣೆ ಸಂದರ್ಭ ಮೈಸೂರು ಜಿಲ್ಲೆಯಲ್ಲಿ 1523 ಅಕ್ರಮ ಬಿಪಿಎಲ್‌ ಕಾರ್ಡ್‌ಗಳನ್ನು ಪತ್ತೆ ಹಚ್ಚಿ ಕ್ರಮ ತೆಗೆದು ಕೊಳ್ಳಲಾಗಿದೆ. ಇಲ್ಲಿಯವರೆಗೆ ಬಡವರ ಕಾರ್ಡ್‌ಗಳನ್ನು ದುರುಪಯೋಗಪಡಿಸಿಕೊಂಡ ಹಿನ್ನೆಲೆಯಲ್ಲಿ ಎರಡು ತಿಂಗಳಿನಲ್ಲಿ 9,564 ರೂ. ದಂಡ ವಸೂಲಿ ಮಾಡಲಾಗಿದೆ. ಎರಡು ವರ್ಷಗಳಿಂದ ರಾಜ್ಯದಲ್ಲಿ ಅನಧಿಕೃತ ಬಿಪಿಎಲ್‌ ಕಾರ್ಡ್‌ಗಳನ್ನು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದ್ದರೂ ಅದರ ಓಟ ನಿರೀಕ್ಷಿತ ಮಟ್ಟದಲ್ಲಿಲ್ಲ. ಸರಕಾರದ ಬದಲಾವಣೆ, ಸಚಿವರ ಬದಲಾವಣೆ, ಇಲಾಖೆ ಕಾರ್ಯದರ್ಶಿ ಹಾಗೂ ಅಧಿಕಾರಿಗಳ ಬದಲಾವಣೆಯಿಂದಾಗಿ ವೇಗ ಪಡೆದುಕೊಂಡಷ್ಟೇ ಶೀಘ್ರವಾಗಿ ತಟಸ್ಥವಾಗುತ್ತಿತ್ತು. ಕಠಿಣ ಕ್ರಮಕ್ಕೆ ಇಲಾಖೆ ಸಜ್ಜು: ಕಳೆದ ವರ್ಷ ಮಾರ್ಚ್ ಅಂತ್ಯಕ್ಕೆ ಅಂತಿಮ ಗಡುವು ನೀಡಲಾಗಿತ್ತು.ಆದರೂ ಕೆಲವೇ ಕೆಲವು ಮಂದಿ ಅನಧಿಕೃತ ಕಾರ್ಡ್‌ಗಳನ್ನು ಹಿಂತಿರುಗಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತೆ ಅಕ್ರಮ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲು ತಂಡಗಳನ್ನು ರಚಿಸಲಾಗಿದೆ. ಈ ಬಾರಿ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಮೈಸೂರು ಜಿಲ್ಲಾಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಶಿವಣ್ಣ 'ವಿಜಯ ಕರ್ನಾಟಕ'ಕ್ಕೆ ತಿಳಿಸಿದ್ದಾರೆ. ನಗರದಲ್ಲಿಯೇ ಹೆಚ್ಚು: ಆಹಾರ ಇಲಾಖೆಯ ಮಾಹಿತಿಯ ಪ್ರಕಾರ ಮೈಸೂರು ನಗರದಲ್ಲಿಯೇ ಹೆಚ್ಚು ಅನರ್ಹರು ಬಿಪಿಎಲ್‌ ಕಾರ್ಡ್‌ಗಳನ್ನು ಹೊಂದಿದ್ದಾರೆ. ಮೈಸೂರು ತಾಲೂಕಿನಲ್ಲಿಒಟ್ಟು 8761 ಅಂತ್ಯೋದಯ ಹಾಗೂ 2,17,637 ಬಿಪಿಎಲ್‌ ಕಾರ್ಡ್‌ಗಳಿವೆ. ತಪಾಸಣೆ ಸಂದರ್ಭ 1523 ಪ್ರಕರಣಗಳನ್ನು ಪತ್ತೆ ಹಚ್ಚಿ ಕಾರ್ಡ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇವುಗಳಲ್ಲಿ1371 ಕಾರ್ಡ್‌ಗಳನ್ನು ರದ್ದುಪಡಿಸಲಾಗಿದ್ದು, 152 ಕಾರ್ಡ್‌ಗಳನ್ನು ಎಪಿಎಲ್‌ಗೆ ಬದಲಾಯಿಸಲಾಗಿದೆ.


from India & World News in Kannada | VK Polls https://ift.tt/3sWX89b

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...