ಹುಬ್ಬಳ್ಳಿ: ವಾಣಿಜ್ಯನಗರಿ ಡ್ರಗ್ಸ್ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಇಲ್ಲಿನ ಉದ್ಯಮಿಯೊಬ್ಬರ ಪುತ್ರಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಗೋಕುಲ ರಸ್ತೆಯ ವಿಮಾನ ನಿಲ್ದಾಣದ ಬಳಿ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಮುಂಬೈ ಮೂಲದ ಅಜಯ್ ರಾವ್ ಎಂಬ ಪೆಡ್ಲರ್ ಹಾಗೂ ಹುಬ್ಬಳ್ಳಿಯ ಹೋಟೆಲ್ ಉದ್ಯಮಿಯೊಬ್ಬರ ಪುತ್ರಿಯನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇವರಿಂದ ಅಪಾರ ಪ್ರಮಾಣದ ಡ್ರಗ್ಸ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಅದರ ಮೌಲ್ಯ ಎಷ್ಟು ಎಂಬುದು ಇನ್ನೂ ಖಚಿತವಾಗಿಲ್ಲ. ಇಬ್ಬರನ್ನು ತೀವ್ರ ವಿಚಾರಣೆಗೊಳಪಡಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
from India & World News in Kannada | VK Polls https://ift.tt/3f5o6Yv