ಬೆಂಗಳೂರಿನಲ್ಲಿ ಖೋಟಾ ನೋಟು ಚಲಾವಣೆ, ನಾಲ್ವರ ಬಂಧನ!

: ಚಲಾವಣೆ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿರುವ ಎಲೆಕ್ಟ್ರಾನಿಕ್‌ ಸಿಟಿ ಠಾಣೆ ಪೊಲೀಸರು, ಆರೋಪಿಗಳಿಂದ 6.80 ಲಕ್ಷ ಮೌಲ್ಯದ 2 ಸಾವಿರ ರೂ. ಮುಖ ಬೆಲೆಯ 340 ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ ಶಿವ, ನಾಗೇಂದ್ರ, ಪ್ರಕಾಶ್‌ ಹಾಗೂ ಲಕ್ಷ್ಮಣ ಬಂಧಿತರು. ಆರೋಪಿಗಳಿಂದ 6.80 ಲಕ್ಷ ಮೌಲ್ಯದ 2 ಸಾವಿರ ರೂ. ಮುಖ ಬೆಲೆಯ 340 ನಕಲಿ ನೋಟುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ದೊಡ್ಡತೋಗುರು ಗ್ರಾಮದ ಸೆಲೆಬ್ರಿಟಿ ಲೇಔಟ್‌ ಮಾರ್ಗವಾಗಿ ಸ್ವಿಫ್ಟ್‌ ಕಾರಿನಲ್ಲಿ ಖೋಟಾ ನೋಟು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಮಾಲು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


from India & World News in Kannada | VK Polls https://ift.tt/2Obb8gq

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...