ಬೆಂಗಳೂರು: ವಿವಾಹಿತ ಮಹಿಳೆಯನ್ನು ಕೊಂದು ಪರಾರಿಯಾಗಿದ್ದ ಪ್ರಿಯಕರನ ಬಂಧನ

ಬೆಂಗಳೂರು: ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಪ್ರಿಯಕರನನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಮೂಲದ ಮಹಬೂಬ್‌ ಬಂಧಿತ ಆರೋಪಿಯಾಗಿದ್ದು, ಈತನನ್ನು ಫಿರ್ಮಾ ಎಂಬಾಕೆಯನ್ನು ಕೊಲೆ ಮಾಡಿದ ಪ್ರಕರಣದಡಿಯಲ್ಲಿ ಬಂಧಿಸಲಾಗಿದೆ. ಯಾದಗಿರಿ ಮೂಲದವಳೇ ಆದ ಫಿರ್ಮಾ ಪತಿಯಿಂದ ಪ್ರತ್ಯೇಕವಾಗಿದ್ದು, ಆನೇಕಲ್‌ ತಾಲೂಕಿನ ಶಾಂತಿಪುರದಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದಳು. ಶನಿವಾರ ಮನೆಯ ಒಳಗೆ ಕೊಲೆಯಾಗಿದ್ದಳು. ತಲೆಗೆ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆ ಆರಂಭಿಸಿದಾಗ ಮಹಿಳೆ ಮೆಹಬೂಬ್‌ ಜತೆ ಅನೈತಿಕ ಸಂಬಂಧ ಹೊಂದಿರುವುದು ಗೊತ್ತಾಗಿತ್ತು. ಸಮೀಪದ ಪ್ರದೇಶದ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಮೆಹಬೂಬ್‌ ಶನಿವಾರ ಫಿರ್ಮಾ ಮನೆಗೆ ಬಂದು ಹೋಗಿರುವುದು ದೃಢಪಟ್ಟಿತ್ತು. ಮೊಬೈಲ್‌ ಲೊಕೇಶನ್‌ ಆದರಿಸಿ ಯಾದಗಿರಿಯ ನೀಲಗಿರಿ ತೋಪಿನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.


from India & World News in Kannada | VK Polls https://ift.tt/3fgaRUU

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...