ಜಮ್ಮು-ಕಾಶ್ಮೀರದ ಶೋಪಿಯಾನ್‌ನಲ್ಲಿ ಸೇನೆ-ಪೊಲೀಸರ ಭರ್ಜರಿ ಕಾರ್ಯಾಚರಣೆ: ನಾಲ್ವರು ಉಗ್ರರು ಉಡೀಸ್‌!

ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಪೊಲೀಸರು ಹಾಗೂ ಯೋಧರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೋಮವಾರ ನಸುಕಿನ ಜಾವ ನಡೆದ ಎನ್ ಕೌಂಟರ್‌ನಲ್ಲಿ ನಾಲ್ವರು ಉಗ್ರರು ಹತ್ಯೆಯಾಗಿದ್ದಾರೆ. ಜಮ್ಮು-ಕಾಶ್ಮೀರ ವಲಯ ಪೊಲೀಸರು, ಸಿಆರ್ ಪಿಎಫ್ ಮತ್ತು ಸೇನೆ ಜಂಟಿ ಕಾರ್ಯಾಚರಣೆ ನಡೆಸಿ ಈ ಉಗ್ರರನ್ನು ಯಮಲೋಕಕ್ಕೆ ಅಟ್ಟಿದ್ದಾರೆ. ಶೋಪಿಯಾನ್ ಜಿಲ್ಲೆಯ ಮಣಿಹಾಲ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ನಿಖರ ಮಾಹಿತಿ ಸಿಕ್ಕಿದ ಹಿನ್ನೆಲೆ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹಾಗೂ ಸೇನೆ. ಉಗ್ರರನ್ನು ಹೊಡೆದುರುಳಿಸಿದ್ದಾರೆ. ಇನ್ನು ಉಗ್ರರಿರುವ ಪ್ರದೇಶಕ್ಕೆ ಮುತ್ತಿಗೆ ಹಾಕಿದ ರಕ್ಷಣಾ ಪಡೆಗಳು, ಉಗ್ರರು ನೆಲೆಯನ್ನು ಹೊಡೆದುರುಳಿಸಿ ಉಗ್ರರನ್ನು ಶರಣಾಗುವಂತೆ ಕೇಳಿದರು. ಆದರೆ ಉಗ್ರರು ಅದಕ್ಕೆ ಒಪ್ಪದೆ ಗುಂಡಿನ ಮಳೆಗೈಯಲಾರಂಭಿಸಿದರು. ಇದಕ್ಕೆ ಪ್ರತ್ಯುತ್ತರ ನೀಡಿದ ಭದ್ರತಾ ಪಡೆ ಉಗ್ರರ ಮೇಲೆ ಗುಂಡಿನ ಮಳೆಗೈಯಲಾರಂಭಿಸಿದರು. ಆಗ ಎರಡು ತಂಡಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಎನ್ ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ರಕ್ಷಣಾ ಪಡೆ ಹತ್ಯೆಗೈದಿದೆ ಎಂದು ಶ್ರೀನಗರ ಸೇನಾ ವಕ್ತಾರ ತಿಳಿಸಿದ್ದಾರೆ. ಮೃತ ಉಗ್ರರ ಬಳಿಯಿಂದ ಎಕೆ ರೈಫಲ್ ಮತ್ತು ಎರಡು ಪಿಸ್ತೂಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ಉಗ್ರರಲ್ಲಿ ಇಬ್ಬರನ್ನು ಲಷ್ಕರ್ ಇ ತೊಯ್ಬಾ ಉಗ್ರಗಾಮಿ ಸಂಘಟನೆಗೆ ಸೇರಿದವರು ಎಂದು ಗುರುತಿಸಲಾಗಿದೆ.ಕಳೆದ ಎರಡು ವಾರಗಳಲ್ಲಿ ಇದು ಉಗ್ರರೊಂದಿಗೆ ಭದ್ರತಾ ಪಡೆ ನಡೆಸಿದ ಎರಡನೇ ದಾಳಿ ಇದಾಗಿದೆ.


from India & World News in Kannada | VK Polls https://ift.tt/3lKbsPN

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...