ಬೆಂಗಳೂರು: ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಒಬ್ಬರ ಹೆಸರನ್ನೇ ಸೂಚಿಸಲು ಕೆಪಿಸಿಸಿ ನಿರ್ಧರಿಸಿದ್ದು, ಬಹುತೇಕವಾಗಿ ಸತೀಶ್ ಜಾರಕಿಹೊಳಿ ಹೆಸರು ಅಂತಿಮವಾಗಿದೆ. ಇದಕ್ಕೆ ಹೈಕಮಾಂಡ್ ಒಪ್ಪಿಗೆ ಮಾತ್ರ ಬಾಕಿ ಇದೆ ಎನ್ನಲಾಗಿದ್ದು, ಕೆಪಿಸಿಸಿ ಕಚೇರಿಯಲ್ಲಿ ನಡೆದ ಕೋರ್‌ಕಮಿಟಿ ಸಭೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಸ್ಕಿಯಲ್ಲಿ 29ರಂದು ಹಾಗೂ ಬಸವ ಕಲ್ಯಾಣದಲ್ಲಿ 30ರಂದು ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದು, ಬೆಳಗಾವಿ ಕ್ಷೇತ್ರಕ್ಕೆ ಒಬ್ಬರ ಹೆಸರನ್ನೇ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದ್ದಾರೆ. ಉಪಚುನಾವಣೆಯಲ್ಲಿ ಉಸ್ತುವಾರಿಯನ್ನು ಹಿರಿಯ ನಾಯಕರಿಗೆ ವಹಿಸಲು ತೀರ್ಮಾನಿಸಲಾಗಿದೆ. ಹೆಚ್ಚು ಬಹಿರಂಗ ಸಭೆಗಳನ್ನು ಮಾಡದೇ ಎರಡೆರಡು ಕಾರ್ಯಕ್ರಮಗಳನ್ನು ಮಾತ್ರ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ ಎಂದು ಡಿಕೆಶಿ ಹೇಳಿದರು. ಇನ್ನು ಮಸ್ಕಿಗೆ ಬಸನಗೌಡ ತುರುವೀಹಾಳ, ಬಸವಕಲ್ಯಾಣದಲ್ಲಿ ಮಲ್ಲಮ್ಮಗೆ ಟಿಕೆಟ್ ನೀಡಲಾಗಿದೆ. ಅವರನ್ನು ಗೆಲ್ಲಿಸುವ ಬಗ್ಗೆ ತಂತ್ರಗಾರಿಕೆ ನಡೆಸಿದ್ದೇವೆ. ಬೆಳಗಾವಿ ಅಭ್ಯರ್ಥಿಯ ಆಯ್ಕೆಯಾಗಿದೆ. ಅವರ ಹೆಸರನ್ನ ಕಾಯ್ದಿಡಲಾಗಿದೆ. ಈ ಸರಕಾರದ ಹನಿಮೂನ್ ಪಿರಿಯಡ್ ಮುಗಿದಿದೆ. ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ರಾಜ್ಯ ಸರಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುವ ಶಂಕೆ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು. ಇತ್ತ ಮೈಸೂರಿನಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಳಗಾವಿ ಉಪಚುನಾವಣೆಗೆ ಅವರ ಹೆಸರನ್ನೇ ಶಿಫಾರಸು ಮಾಡಿದ್ದೇವೆ. ಬಹುತೇಕ ಅವರಿಗೆ ಟಿಕೆಟ್ ಫೈನಲ್ ಆಗಲಿದೆ ಎಂದು ಹೇಳಿರೋದು ಜಾರಕಿಹೊಳಿನೇ ಬೆಳಗಾವಿಯ ಕಾಂಗ್ರೆಸ್ ಅಭ್ಯರ್ಥಿ ಅನ್ನೋದು ಪಕ್ಕಾ ಆಗಿದೆ.
from India & World News in Kannada | VK Polls https://ift.tt/313bXLq