‘ಎಸ್‌ಐಟಿ ಅಧಿಕಾರಿಗಳು ಜಾರಕಿಹೊಳಿ ಜತೆ ಸೇರಿ ಬೆದರಿಕೆ ಹಾಕಿದ್ದಾರೆ’; ಹೈಕೋರ್ಟ್‌ ಸಿಜೆಗೆ ಸಿ.ಡಿ ಲೇಡಿ ಪತ್ರ

ಬೆಂಗಳೂರು: ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದಾರೆ. ಎಸ್‌ಐಟಿಯಿಂದ ಸಿಡಿ ಯುವತಿಯ ಪೋಷಕರ ವಿಚಾರಣೆ ಹಿನ್ನೆಲೆಯಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಯುವತಿ ಇ ಮೇಲ್ ಮೂಲಕ ಪತ್ರ ಕಳಿಸಿದ್ದಾರೆ. ನಿಮ್ಮ ಮೇಲುಸ್ತುವಾರಿಯಲ್ಲಿ ಎಸ್‌ಐಟಿ ತನಿಖೆಯಾಗಬೇಕು. ನನ್ನ ತಂದೆ ತಾಯಿಯಿಂದ ಬಲವಂತವಾಗಿ ಹೇಳಿಕೆ ಕೊಡಿಸಿಕೊಳ್ಳಲಾಗಿದೆ. ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ನನ್ನ ಪೋಷಕರಿಗೆ ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ್ದಾರೆ. ಕೇಸ್ನಲ್ಲಿ ನನಗೆ ಮತ್ತು ನನ್ನ ಪೋಷಕರಿಗೆ ರಕ್ಷಣೆ ನೀಡಬೇಕು ಅಂತಾ ಪತ್ರದಲ್ಲಿ ಸಿಡಿ ಲೇಡಿ ಮನವಿ ಮಾಡಿಕೊಂಡಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಯುವತಿ ಬರೆದಿರುವ ಪತ್ರದಲ್ಲಿ, ‘ನಮ್ಮ ಕುಟುಂಬಕ್ಕೆ ಬೆದರಿಕೆ ಹಾಕಿಸಿದ್ದಾರೆ. ರಮೇಶ್ ಜಾರಕಿಹೊಳಿ ಜತೆ ಸೇರಿಕೊಂಡು ಎಸ್‌ಐಟಿ ಅಧಿಕಾರಿಗಳು ನನಗೂ, ನಮ್ಮ ಕುಟುಂಬಕ್ಕೂ ಯಾವುದೇ ರಕ್ಷಣೆ ನೀಡಿಲ್ಲ. ಎಸ್‌ಐಟಿ ಮುಖಾಂತರ ನಮ್ಮ ಕುಟುಂಬಕ್ಕೆ ಬೆದರಿಕೆ ಹಾಕಿಸಿದ್ದಾರೆ. ರಮೇಶ್ ತಮ್ಮ ಪ್ರಭಾವ ಬಳಸಿ ಸಾಕ್ಷ್ಯನಾಶ ಮಾಡುತ್ತಿದ್ದಾರೆ. ಅವರು ನನಗೆ ಬಹಿರಂಗವಾಗಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಯಾವುದೇ ಸಮಯದಲ್ಲಿ, ಯಾವುದೇ ಸ್ಥಳದಲ್ಲಿ ಬೇಕಾದರೂ ನಮ್ಮನ್ನು ಕೊಲ್ಲಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನು ಎಸ್ಐಟಿ, ರಮೇಶ್ ಜಾರಕಿಹೊಳಿ ಹೇಳಿದಂತೆ ಕಾರ್ಯನಿರ್ವಹಿಸ್ತಿದೆ. ಕರ್ನಾಟಕ ಸರ್ಕಾರವೂ ಸಹ ರಮೇಶ್‌ರನ್ನು ರಕ್ಷಣೆ ಮಾಡ್ತಿದೆ. ಎಸ್‌ಐಟಿ ಹಾಗೂ ಸರ್ಕಾರದ ಮೇಲೆ ನನಗೆ ನಂಬಿಕೆಯಿಲ್ಲ ಎಂದು ಸಿಡಿ ಲೇಡಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಡಿವೈಎಸ್ಪಿ ಕಟ್ಟೀಮನಿ ನಮ್ಮ ಕುಟುಂಬದ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಮ್ಮ ಪೋಷಕರಿಂದ ಒತ್ತಡ ಹಾಕಿ ನನ್ನನ್ನ ಕಿಡ್ನ್ಯಾಪ್ ಮಾಡಿಸಿರುವುದಾಗಿ ಹೇಳಿಕೆ ನೀಡಿಸಿದ್ದಾರೆ. ಡಿವೈಎಸ್ಪಿ ಕಟ್ಟೀಮನಿ ನಮ್ಮ ಕುಟುಂಬದ ಮೇಲೆ ಒತ್ತಡ ಹಾಕುತ್ತಿದ್ದಾರೆ. ಕಟ್ಟೀಮನಿ ರಮೇಶ್ ಜಾರಕಿಹೊಳಿ ಪರವಾಗಿ ಕೆಲಸ ಮಾಡುತ್ತಿದ್ದಾರೆ. ನ್ಯಾಯಾಲಯವು ನನ್ನ ಮನವಿಯನ್ನ ಗಂಭೀರವಾಗಿ ಪರಿಗಣಿಸಬೇಕು. ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ತನಿಖೆ ನಡೆಸಿ ನನಗೆ ನ್ಯಾಯ ಒದಗಿಸಬೇಕು. ನನಗೆ ಜೀವಭಯ ಹಿನ್ನೆಲೆ ರಕ್ಷಣೆ ನೀಡುವಂತೆ ಸಿಡಿ ಲೇಡಿ ಮನವಿ ಮಾಡಿಕೊಂಡಿದ್ದಾಳೆ.


from India & World News in Kannada | VK Polls https://ift.tt/39pxAKl

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...