ಕೋವಿಡ್ ಲಸಿಕೆ ಸಾರ್ವಜನಿಕರಿಗೆ ಉಚಿತವಾಗಿ ವಿತರಣೆಯಾಗಲಿ; ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಕೋವಿಡ್ ಲಸಿಕೆಯನ್ನು ಸಾರ್ವಜನಿಕರಿಗೆ ಉಚಿತವಾಗಿ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷದ ನಾಯಕ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರಬರೆದಿದ್ದಾರೆ. ದೇಶದಾದ್ಯಂತ ಕೋವಿಡ್‌ ಲಸಿಕೆ ಅಭಿಯಾನ ಶುರುವಾಗಿದೆ. ಆದರೆ ಜನಸಾಮಾನ್ಯರಿಗೆ ವಾಕ್ಸಿದ್ ದರ ನಿಗದಿ ಮಾಡಲಾಗಿದೆ. ಆದರೆ ವ್ಯಾಕ್ಸಿನ್‌ಗೆ ಹಣ ಪಡೆಯದೆ ಉಚಿತವಾಗಿ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಕೋವಿಡ್‌ ನಿಂದ ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂಕಷ್ಟದ ಅವಧಿಯಲ್ಲಿ ವ್ಯಾಕ್ಸಿಲ್ ನಿರೀಕ್ಷೆ ಹುಟ್ಟಿಸಿದೆ. ಆದರೆ ಅಭಿಯಾನ ನಿಧಾನಗತಿಯಲ್ಲಿ ಸಾಗುತ್ತಿದೆ. ಇದುವರೆಗೆ ದೇಶದ ಜನಸಂಖ್ಯೆಯ ಒಟ್ಟು ಶೇ.0.5 ರಷ್ಟು ಮಂದಿಗೆ ಮಾತ್ರ ಲಿಸಿಕೆ ಸಿಕ್ಕಿದೆ. ಇಸ್ರೇಲ್ 36 ಶೇ, ಅಮೆರಿಕಾ 6 ಶೇ, ಇಂಗ್ಲೆಂಡ್‌ 4 ಶೇ ಜನಸಂಖ್ಯೆಗೆ ಕೋವಿಡ್ ಲಸಿಕೆಯನ್ನು ನೀಡಿದೆ. ಉಚಿತವಾಗಿ ಈ ಎಲ್ಲಾ ದೇಶಗಳು ಲಸಿಕೆಯನ್ನು ಜನರಿಗೆ ನೀಡಿವೆ. ಆದರೆ ಭಾರತದಲ್ಲಿ ಜನಸಾಮಾನ್ಯರಿಗೆ 250 ರೂಪಾಯಿ ದರ ವಸೂಲಿ ಮಾಡಲು ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಸೂಕ್ತ ಕ್ರಮ ಕೈಗೊಂಡು ಲಸಿಕೆ ಉಚಿತವಾಗಿ ಜನಸಾಮಾನ್ಯರಿಗೆ ದೊರಕುವಂತೆ ಮಾಡಬೇಕು ಎಂದು ಪತ್ರದ ಮೂಲಕ ಆಗ್ರಹ ಮಾಡಿದ್ದಾರೆ. ಅಲ್ಲದೆ ಪಿಎಂ ಕೇರ್ ಫಂಡ್‌ ನ್ನು ಲಸಿಕೆಗೆ ಬಳಕೆ ಮಾಡಿ ಎಂದು ಒತ್ತಾಯಿಸಿದ್ದಾರೆ.


from India & World News in Kannada | VK Polls https://ift.tt/3bkn7Br

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...