
ಬೆಂಗಳೂರು: ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾಕಿಹೊಳಿಯನ್ನು ಕೂಡಲೇ ಬಂಧಿಸಿ ಎಂದು ಆಗ್ರಹಿಸಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಪ್ರಕರಣ ಪ್ರಭಾವಕ್ಕೆ ಒಳಗಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದು ಆಗ್ರಹಿಸಿದೆ. ಅತ್ಯಾಚಾರ ಆರೋಪಿ ಸರ್ಕಾರವನ್ನೇ ಉರುಳಿಸಿಬಿಡಬಲ್ಲೆ, ಬಾಂಬ್ ಹಾಕುತ್ತೇನೆ, ಮತ್ತೊಂದು ಮಾಡುತ್ತೇನೆ ಎನ್ನುವ ಬೆದರಿಕೆ ಹಾಕುತ್ತಾ ರಾಜಾರೋಷವಾಗಿ ತಿರುಗುತ್ತಿರುವುದು ಬಹುಶಃ ಇದೇ ಮೊದಲೇನೋ ಎಂದು ಟ್ವಿಟ್ಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದೆ. ಈ ನಿಟ್ಟಿನಲ್ಲಿ ಕೂಡಲೇ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕು ಹಾಗೂ ಪ್ರಕರಣ ಪ್ರಭಾವಕ್ಕೆ ಒಳಗಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಮಾಜಿ ಸಚಿವ ವಿರುದ್ಧ ಯುವತಿ ದೂರು ನೀಡಿದ್ದು ಉದ್ಯೋಗ ಕೊಡಿಸುವ ಹೆಸರಿನಲ್ಲಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಅಲ್ಲದೆ ರಮೇಶ್ ಜಾರಕಿಹೊಳಿಯಿಂದ ಕೊಲೆ ಪ್ರಯತ್ನವೂ ನಡೆಯಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ರಮೇಶ್ ಜಾರಕಿಹೊಳಿ ಈ ಆರೋಪವನ್ನು ನಿರಾಕರಿಸಿದ್ದು ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥನೆ ನೀಡಿದ್ದಾರೆ. ಅಲ್ಲದೆ ಶನಿವಾರ ಸಂಜೆ ದೊಡ್ಡ ಸುದ್ದಿಯನ್ನು ನೀಡುತ್ತೇನೆ ಎಂದಿದ್ದಾರೆ.
from India & World News in Kannada | VK Polls https://ift.tt/3w4feby