ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್?: 'ಸದ್ಯಕ್ಕಿಲ್ಲ' ಎಂದ ಕೃಷಿ ಸಚಿವ ಬಿ.ಸಿ ಪಾಟೀಲ್!

ಬೆಂಗಳೂರು:ಯಾವುದೇ ಕಾರಣಕ್ಕೂ ಸದ್ಯಕ್ಕೆ ಜಾರಿ ಮಾಡದಿರಲು ಸರ್ಕಾರ ನಿರ್ಧರಿಸಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ‌. ವಿಧಾನಸೌಧದಲ್ಲಿ ಇಂದು(ಮಾ.22-ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಪ್ರಸಕ್ತ ಆರ್ಥಿಕ ಪರಿಸ್ಥಿಯಲ್ಲಿ ಲಾಕ್‌ಡೌನ್ ಜಾರಿಗೊಳಿಸುವ ಪರಿಸ್ಥಿತಿ ಇಲ್ಲ.ಕಳೆದ ವರ್ಷಕ್ಕೂ ಈ ವರ್ಷಕ್ಕೂ ಪರಿಸ್ಥಿತಿ ಬೇರೆ ಇದೆ. ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದೇವೆ. ಜನರೂ ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕೆಂದು ಸಚಿವರು ಮನವಿ ಮಾಡಿದರು. ನ್ಯಾಯಾಲಯಕ್ಕೆ ಹೋಗುವುದು ನನ್ನ ಹಕ್ಕಾಗಿದ್ದು, ಅದನ್ನು ಪ್ರಶ್ನಿಸಲು ಕಾಂಗ್ರೆಸ್‌ನವರಿಗೆ ಯಾವುದೇ ಹಕ್ಕಿಲ್ಲ. ಕಾಂಗ್ರೆಸ್ ನಾಯಕರು ನೀತಿ ಸಿದ್ದಾಂತದ ಮೇಲೆ ಹೊರಾಟ ಮಾಡಬೇಕು.ಅವರಿಗೆ ಹೋರಾಟ ಮಾಡಲು ಯಾವುದೇ ವಿಷಯಗಳು ಸಿಗುತ್ತಿಲ್ಲ.ಹೀಗಾಗಿ ಮೈತ್ರಿ ಸರ್ಕಾರ ಪತನಗೊಂಡ ಕಾರಣಕ್ಕೆ ನಮ್ಮ ಮೇಲೆ ವೈಯಕ್ತಿಕ ದ್ವೇಷ ಸಾಧಿಸುತ್ತಿದ್ದಾರೆಂದು ಬಿ.ಸಿ.ಪಾಟೀಲ್ ಹರಿಹಾಯ್ದರು. ಇನ್ನು ರೈತರ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇರುವುದರಿಂದ ಈ ಕಾಯ್ದೆಗಳಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಕೇಂದ್ರದ ನಡೆಯನ್ನು ಬಿ.ಸಿ.ಪಾಟೀಲ್ ಸಮರ್ಥಿಸಿಕೊಂಡರು.


from India & World News in Kannada | VK Polls https://ift.tt/38YVgoL

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...