ಬೆಂಗಳೂರು: ವಿರೋಧ ಪಕ್ಷದ ನಾಯಕ ಹಾಗೂ ಅವರ ಕಾಲು ಹಿಡಿದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಶೀರ್ವಾದ ಪಡೆದ ಘಟನೆ ನಡೆದಿದೆ. ಬುಧವಾರ ನಡೆದ ಜನಧ್ವನಿ ಯಾತ್ರೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಕಾಲು ಹಿಡಿದು ಆಶೀರ್ವಾದ ಪಡೆದುಕೊಂಡಿದ್ದಾರೆ. ಮೈಸೂರು ಮೇಯರ್ ಚುನಾವಣೆ ವಿವಾದದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯ ತೀವ್ರಗೊಂಡಿದೆ ಎಂದು ಹೇಳಲಾಗಿತ್ತು. ಉಭಯ ನಾಯರ ನಡುವೆ ಶೀತಲ ಸಮರ ಏರ್ಪಟ್ಟಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಈ ನಡುವೆ ಭಿನ್ನಾಭಿಪ್ರಾಯ ಶಮನ ಮಾಡಲು ಕಾಂಗ್ರೆಸ್ ಹೈಕಮಾಂಡ್ ಪ್ರಯತ್ನ ನಡೆಸಿತ್ತು. ಎಐಸಿಸಿ ಸಂಧಾನಕಾರರಾಗಿ ಮಧು ಯಕ್ಷಿ ಗೌಡ ರಾಜ್ಯಕ್ಕೆ ಆಗಮಿಸಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದೀಗ ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಕಾಲು ಹಿಡಿಯುವ ಮೂಲಕ ಭಾರಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದಾರೆ. ಸಿದ್ದರಾಮಯ್ಯರ ಕಾಲು ಹಿಡಿದು ಆಶೀರ್ವಾದ ಪಡೆಯುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
from India & World News in Kannada | VK Polls https://ift.tt/3863vPu