ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶರತ್ ಬಚ್ಚೇಗೌಡ ಭಾಗಿ: ಸಿದ್ದರಾಮಯ್ಯ ಹಿಂದೆ 'ಯುವ ನಾಯಕ'!

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಕರೆದಿದ್ದ ಶಾಸಕಾಂಗ ಪಕ್ಷದ ಸಭೆಯಲ್ಲಿ, ಹೊಸಕೋಟೆ ಶಾಸಕ ಭಾಗಿಯಾಗಿ ಗಮನ ಸೆಳೆದಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ಗೆ ಬಾಹ್ಯ ಬೆಂಬಲ ಘೋಷಣೆ ಮಾಡಿದ್ದ ಶರತ್ ಬಚ್ಚೇಗೌಡ, ಇದೀಗ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗಿಯಾಗುವ ಮೂಲಕ ಸ್ಪಷ್ಟ ಸಂದೇಶ ರವಾನಿಸುವ ಪ್ರಯತ್ನ ಮಾಡಿದ್ದಾರೆ. ಶರತ್ ಬಚ್ಚೇಗೌಡ ಕಾಂಗ್ರಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆ ಆಗದಿದ್ದರೂ, ಪಕ್ಷದ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಅವರು ಮೊದಲ ಬಾರಿ ಹಾಜರಾಗಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಎಸ್‌ಆರ್‌ ಪಾಟೀಲ್ ಅವರ ಹಿಂದೆಯೇ ನಿಂತಿದ್ದ ಶರತ್ ಬಚ್ಚೇಗೌಡ, ಬಜೆಟ್ ಅಧಿವೇಶನಕ್ಕೆ ಪಕ್ಷದ ತಯಾರಿ ಕುರಿತು ಹಿರಿಯ ನಾಯಕರು ನಡೆಸುತ್ತಿದ್ದ ಚರ್ಚೆಯನ್ನು ಆಲಿಸಿದರು. ಕಾಂಗ್ರೆಸ್ ಸದಸ್ಯತ್ವ ಪಡೆದುಕೊಂಡಿರುವ ಶರತ್ ಬಚ್ಚೇಗೌಡ ಅವರೊಂದಿಗೆ ನಾವು ಗಟ್ಟಿಯಾಗಿ ನಿಲ್ಲಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಿಂದೆಯೇ ಭರವಸೆ ನೀಡಿದ್ದರು. ಅದರಂತೆ ಇಂದು(ಮಾ.04-ಗುರುವಾರ) ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸುವ ಮೂಲಕ, ತಾವು ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಹತ್ತಿರವಾಗಿರುವ ಸ್ಪಷ್ಟ ಸಂದೇಶವನ್ನು ಶರತ್ ಬಚ್ಚೇಗೌಡ ರವಾನಿಸಿದ್ದಾರೆ. ಇನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ, ಬಜೆಟ್ ಅಧಿವೇಶನದ ವೇಳೆ ಬಿಜೆಪಿ ಸರ್ಕಾರವನ್ನು ಕಟ್ಟಿ ಹಾಕುವ ರಣತಂತ್ರದ ಕುರಿತು ಚರ್ಚೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.


from India & World News in Kannada | VK Polls https://ift.tt/3c0gQtF

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...