ಕೊಡಾಜೆ ಬಳಿ ಆಟೋ-ಕಾರು ನಡುವೆ ಭೀಕರ ರಸ್ತೆ ಅಪಘಾತ; ಆಟೋ ಚಾಲಕ ಸಾವು

ಬಂಟ್ವಾಳ: ಆಟೋ ರಿಕ್ಷಾ ಮತ್ತು ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆಟೋಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಡಾಜೆ ಬಳಿ ನಡೆದಿದೆ. ಬಂಟ್ವಾಳ ತಾಲೂಕಿನ ಮಾಣಿ ಸಮೀಪ ಕೊಡಾಜೆ ಎಂಬಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೊಡಾಜೆ ಪಂತಡ್ಕ ನಿವಾಸಿ ಅಮ್ಮಿ ಎಂಬಾತ ಮೃತಪಟ್ಟಿದ್ದಾರೆ. ಆಟೋ ರಿಕ್ಷಾ ಚಲಾಯಿಸುತ್ತಿದ್ದ ಇವರು ತನ್ನ ಆಟೋದಲ್ಲಿ ಪತ್ನಿಯನ್ನು ಕರೆದುಕೊಂಡು ಕೊಡಾಜೆ ಕಡೆಯಿಂದ ಮಾಣಿ ಕಡೆಗೆ ತೆರಳುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ. ಮಾಣಿಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಅಮ್ಮಿ ಅವರ ಆಟೋಗೆ ಗುದ್ದಿದೆ. ಈ ಸಂದರ್ಭ ಆಟೊ ಕಾರಿನ ಮೇಲೆ ಉರುಳಿಬಿದ್ದಿದ್ದು, ಎರಡೂ ವಾಹನಗಳು ಜಖಂಗೊಂಡಿವೆ. ಚಾಲಕನ ಪತ್ನಿ ಕಾಲಿಗೆ ಗಾಯಗಳುಂಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.


from India & World News in Kannada | VK Polls https://ift.tt/3crlBOa

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...