ಅನ್ಯಾಯ ಆಗಿದೆ ಎಂದು ಅಖಂಡ ನೋವು, ಕಾಂಗ್ರೆಸ್ ಶಾಸಕನ ಅಳಲು ಕೇಳಿಸಿಕೊಳ್ಳೋರೆ ಇಲ್ಲ!

ಬೆಂಗಳೂರು: ನನಗೆ ಅನ್ಯಾಯ ಆಗಿದೆ, ನ್ಯಾಯ ಕೊಡಿಸಿ ಎಂದು ಪುಲಕೇಶಿನಗರ ಕಾಂಗ್ರೆಸ್ ಶಾಸಕ ಪರಿ ಪರಿಯಾಗಿ ಕೇಳಿಕೊಂಡರೂ ಮನೆಗೆ ಬೆಂಕಿ ಹಾಕಿದ ಆರೋಪಿ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಳ್ಳದೆ ಇರುವುದು ಚರ್ಚೆಗೆ ಗ್ರಾಸವಾಗಿದೆ. ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣದ ಸಂದರ್ಭದಲ್ಲಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಹಚ್ಚಲಾಗಿತ್ತು. ಈ ಆರೋಪದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನವಾಗಿತ್ತು. ಸದ್ಯ ಜಾಮೀನಿನ ಮೇಲೆ ಸಂಪತ್ ರಾಜ್ ಬಿಡುಗಡೆ ಆಗಿದ್ದರೂ ಪಕ್ಷ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ತಮ್ಮ ಮನೆಗೆ ಬೆಂಕಿ ಹಾಕಿದ ಸಂಪತ್ ರಾಜ್ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಅವರನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ಅಖಂಡ ಬೇಡಿಕೆಯನ್ನು ಇಡುತ್ತಲೇ ಬರುತ್ತಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಈ ಬಗ್ಗೆ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಪಕ್ಷದ ಪ್ರಮುಖರ ನಡೆಯಿಂದ ಅಖಂಡ ಬೇಸತ್ತಿದ್ದು ಹೈಕಮಾಂಡ್‌ಗೆ ದೂರು ನೀಡಲು ಮುಂದಾಗಿದ್ದಾರೆ. ಅಷ್ಟೇ ಅಲ್ಲದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನನ್ನನ್ನು ಗುರಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಅವರು ಮಾಡಿದ್ದಾರೆ. ಮತ್ತೊಂದು ಕಡೆ ಮಾಜಿ ಶಾಸಕ ಪ್ರಸನ್ನ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿದೆ. ಇದಕ್ಕೆ ಅಖಂಡ ವಿರೋಧ ಇದ್ದರೂ ಪ್ರಸನ್ನ ಅವರ ಸೇರ್ಪಡೆ ಸಾಕಷ್ಟು ಕುತೂಹಲ ಕೆರಳಿಸಿದೆ. ಈ ಮೂಲಕ ಮುಂದಿನ ಚುನಾವಣೆಯಲ್ಲಿ ಅಖಂಡಗೆ ಟಿಕೆಟ್‌ ಕೈತಪ್ಪುವ ಭೀತಿಯೂ ಎದುರಾಗಿದೆ. ಅಖಂಡ ಶ್ರೀನಿವಾಸ್ ಮೂರ್ತಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಜಮೀರ್ ಅಹ್ಮದ್ ಖಾನ್ ಬೆಂಬಲ ಇದೆ. ಆದರೆ ಡಿಕೆ ಶಿವಕುಮಾರ್ ಅವರು ಸಂಪತ್ ರಾಜ್ ಪರವಾಗಿದ್ದಾರೆ ಎಂಬ ಆರೋಪವನ್ನು ಸ್ವತಃ ಅಖಂಡ ಮಾಡುತ್ತಾ ಬರುತ್ತಿದ್ದಾರೆ. ಈ ಕಾರಣಕ್ಕಾಗಿ ಸಂಪತ್ ರಾಜ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬುವುದು ಅಖಂಡ ವಾದ. ಪಕ್ಷದ ನಡೆಯಿಂದ ಬೇಸತ್ತಿರುವ ಅಖಂಡ ನ್ಯಾಯಾಲಯದ ಮೂಲಕ ಹೋರಾಟ ನಡೆಸಲು ಮುಂದಾಗಿದ್ದಾರೆ. ನನ್ನ ಬೆಂಬಲಕ್ಕೆ ಪಕ್ಷ ಬಾರದೇ ಇದ್ದರೂ ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುತ್ತೇನೆ ಎಂಬ ವಿಶ್ವಾಸವನ್ನು ಅಖಂಡ ವ್ಯಕ್ತಪಡಿಸುತ್ತಾರೆ. ಒಟ್ಟಿನಲ್ಲಿ ಕಾಂಗ್ರೆಸ್‌ ಪಕ್ಷದ ಈ ನಡೆ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಪಕ್ಷದ ಶಾಸಕರ ಮನೆಯನ್ನೇ ಸುಟ್ಟ ಆರೋಪಿಗೆ ರಕ್ಷಣೆ ಕೊಡುವ ಉದ್ದೇಶ ಏನು ಎಂಬ ಪ್ರಶ್ನೆ ಸಹಜವಾಗಿ ಕಾಡುತ್ತಿದೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ಉತ್ತರ ಕೊಡಬೇಕಿದೆ.


from India & World News in Kannada | VK Polls https://ift.tt/3bPaqO1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...