![](https://vijaykarnataka.com/photo/81340916/photo-81340916.jpg)
ಮಂಗಳೂರು: ಮುಕ್ಕದ ಖಾಸಗಿ ಕಾಲೇಜೊಂದರಲ್ಲಿ ನಡೆಸಿದ ವಿದ್ಯಾರ್ಥಿಗಳನ್ನು ಪ್ರಶ್ನಿಸಿದ ಪ್ರಿನ್ಸಿಪಾಲರಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಬುಧವಾರ ನಡೆದಿದೆ. ಮಹಮ್ಮದ್ ಬಾಝಿಲ್, ಸಂಭ್ರಮ್ ಆಳ್ವ, ಸಮೀಲ್, ಅಶ್ವಿನ್ ಎಸ್. ಜಾನ್ಸನ್ ಬಂಧಿತರು. ಪ್ರಕರಣ ವಿವರ: ಕಾಲೇಜಿನಲ್ಲಿ ರ‍್ಯಾಗಿಂಗ್ ನಡೆಸಿರುವ ಬಗ್ಗೆ ಕಿರಿಯ ವಿದ್ಯಾರ್ಥಿಗಳು ಪ್ರಿನ್ಸಿಪಾಲರ ಗಮನಕ್ಕೆ ತಂದಿದ್ದರು. ಅದರಂತೆ ನಾಲ್ವರು ವಿದ್ಯಾರ್ಥಿಗಳನ್ನು ಕರೆದ ಪ್ರಿನ್ಸಿಪಾಲ್ ಬುದ್ಧಿಮಾತು ಹೇಳಿದ್ದಲ್ಲದೆ, ಇನ್ನು ಮುಂದುವರಿಸಿದರೆ ಡಿಬಾರ್ ಮಾಡುವುದಾಗಿ ಎಚ್ಚರಿಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳು ಪ್ರಿನ್ಸಿಪಾಲ್‌ಗೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಈ ಬೆಳವಣಿಗೆಯಿಂದ ಪ್ರಿನ್ಸಿಪಾಲ್ ಅವರೇ ಕೆಲ ಕಾಲ ಶಾಕ್‌ಗೊಳಗಾಗಿದ್ದಾರೆ. ಹಲ್ಲೆ ಮಾಡಿದ ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮತ್ತೆ ರ‍್ಯಾಗಿಂಗ್: ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಎರಡು ತಿಂಗಳ ಅವಧಿಯಲ್ಲಿ ಮೂರನೇ ರ‍್ಯಾಗಿಂಗ್ ಪ್ರಕರಣ ವರದಿಯಾಗಿದೆ. ನಗರದ ಕಾಲೇಜುಗಳಲ್ಲಿ ರ‍್ಯಾಗಿಂಗ್ ಪ್ರಕರಣ ಹೆಚ್ಚುತ್ತಿರುವುದು ಹೊರ ಜಿಲ್ಲೆ, ರಾಜ್ಯದ ಪಾಲಕರು ಆತಂಕ ಪಡುವಂತಾಗಿದೆ. ಈ ಹಿಂದೆ ವಳಚ್ಚಿಲ್ ಹಾಗೂ ದೇರಳಕಟ್ಟೆಯಲ್ಲಿ ರ‍್ಯಾಗಿಂಗ್ ಪ್ರಕರಣ ಬೆಳಕಿಗೆ ಬಂದಿತ್ತು.
from India & World News in Kannada | VK Polls https://ift.tt/3kMQIpZ