ಬಂಗಾಳದಲ್ಲಿ ಕಾಂಗ್ರೆಸ್ VS ಕಾಂಗ್ರೆಸ್: 'ಕೈ' ಸುಡಲು ಕಾರಣವಾಗುವುದೇ ಐಎಸ್‌ಎಫ್‌ ಜೊತೆಗಿನ ಮೈತ್ರಿ?

ಕೋಲ್ಕತ್ತಾ: ಚುನಾವಣೆ ಹೊಸ್ತಿಲಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಾಗೂ ಟಿಎಂಸಿ ಪಕ್ಷಗಳ ಅಬ್ಬರದ ನಡುವೆ, ಕಾಂಗ್ರೆಸ್ ಹಾಗೂ ಎಡಪಕ್ಷಗಳ ಮೈತ್ರಿಕೂಟ ಮಂಕಾಗಿದೆ. ದುರ್ಬಲ ಮೈತ್ರಿಕೂಟದ ನಡುವೆಯೂ ಪಶ್ಚಿಮ ಬಂಗಾಳದಲ್ಲಿ ಗೆಲುವಿನ ಕನಸು ಕಾಣುತ್ತಿರುವ ಕಾಂಗ್ರೆಸ್, ಇದೀಗ ಆಂತರಿಕ ಒಳ ಬೇಗುದಿಯನ್ನೂ ಎದುರಿಸಬೇಕಾದ ಪರಿಸ್ಥಿತಿ ಬಂದೊದಗಿದೆ. ಎಲ್ಲವೂ ಸರಿಯಿದ್ದ ಪಶ್ವಿಮ ಬಂಗಾಳದಲ್ಲಿ ಇದೀಗ ಇಂಡಿಯನ್ ಸೆಕ್ಯೂಲರ್ ಫ್ರಂಟ್(ಐಎಸ್‌ಎಫ್‌)‌ ಪಕ್ಷದೊಂದಿಗಿನ ಮೈತ್ರಿ ಕಾಂಗ್ರೆಸ್‌ನಲ್ಲಿ ಒಡಕು ಸೃಷ್ಟಿಸಿದೆ. ಕೋಮುವಾದಿ ಪಕ್ಷ ಎಂಬ ಹಣೆಪಟ್ಟಿ ಹೊತ್ತಿರುವ ಐಎಸ್‌ಎಫ್‌ನೊಂದಿಗೆ, ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಮೈತ್ರಿಕೊಂಡಿರುವುದಕ್ಕೆ ಕಾಂಗ್ರೆಸ್ ಹಿರಿಯ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಬಹಿರಂಗವಾಗಿ ಅಸಮಾಧಾನ ಹೊರಹಾಕಿರುವ ಕಾಂಗ್ರೆಸ್ ಹಿರಿಯ ನಾಯಕ , ಕೋಮುವಾದದ ವಿರುದ್ಧ ಹೋರಾಡುವ ತನ್ನ ದೃಢ ನಿಶ್ಚಯದಲ್ಲಿ ಪಕ್ಷ ಎಂದಿಗೂ ದ್ವಿಮುಖ ನೀತಿಯನ್ನು ಅನುಸರಿಸಬಾರದು ಎಂದು ಹೈಕಮಾಂಡ್‌ನ್ನು ಚುಚ್ಚಿದ್ದಾರೆ. ಕೋಮುವಾದದ ವಿರುದ್ಧ ನಿರಂತರ ಹೋರಾಟ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸಿದ್ಧಾಂತ. ಗಾಂಧಿ ಹಾಗೂ ನೆಹರೂ ಅವರಂತ ದಾರ್ಶನಿಕರು ಹಾಕಿಕೊಟ್ಟ ಈ ಸಿದ್ಧಾಂತವನ್ನು ಚುನಾವಣಾ ಲಾಭಕ್ಕಾಗಿ ಮರೆಯುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಆನಂದ್ ಶರ್ಮಾ ಅಸಮಾಧಾನ ಹೊರಹಾಕಿದ್ದಾರೆ. ಎಲ್ಲಾ ರೀತಿಯ ಕೋಮುವಾದದ ವಿರುದ್ಧ ಹೋರಾಡುವುದು ಕಾಂಗ್ರೆಸ್‌ನ ಕರ್ತವ್ಯ. ಆದರೆ ಚುನಾವಣಾ ಲಾಭಕ್ಕಾಗಿ ಈ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಳ್ಳುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಆನಂದ್ ಶರ್ಮಾ ಟ್ವೀಟ್ ಮಾಡಿದ್ದಾರೆ. ಇನ್ನು ಆನಂದ್ ಶರ್ಮಾ ಆರೋಪಕ್ಕೆ ತಿರುಗೇಟು ನೀಡಿರುವ ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ, ಎಲ್ಲಾ ನಿರ್ಣಯವನ್ನು ಪಕ್ಷದ ಹೈಕಮಾಂಡ್‌ ಗಮನಕ್ಕೆ ತಂದ ಬಳಿಕವೇ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಐಎಸ್‌ಎಫ್‌ ಪಕ್ಷದೊಂದಿಗಿನ ಮೈತ್ರಿಯ ಕುರಿತು ಹೈಕಮಾಂಡ್ ಜೊತೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗಿದೆ. ಅಲ್ಲದೇ ಕೋಮುವಾದದ ವಿರುದ್ಧ ರಾಜಿ ಮಾಡಿಕೊಂಡ ಉದಾಹರಣೆ ಕಾಂಗ್ರೆಸ್ ಇತಿಹಾಸದಲ್ಲೇ ಇಲ್ಲ ಎಂದು ಚೌಧರಿ ಗುಡುಗಿದ್ದಾರೆ. ಒಟ್ಟಿನಲ್ಲಿ ಐಎಫ್‌ಎಸ್‌ನೊಂದಿಗಿನ ಮೈತ್ರಿ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ಗೆ ಲಾಭ ತಂದುಕೊಡಲಿದೆಯೋ ಅಥವಾ ಪಕ್ಷಕ್ಕೆ ಮತ್ತಷ್ಟು ಹಾನಿ ಮಾಡಲಿದೆಯೋ ಕಾದು ನೋಡಬೇಕಿದೆ. ಐಎಸ್‌ಎಫ್‌ ಮುಸ್ಲಿಂ ನಾಯಕ ಅಬ್ಬಾಸ್ ಸಿದ್ದೀಖಿ ಅವರ ನೇತೃತ್ವದ ಪಕ್ಷವಾಗಿದ್ದು, ಅವರು ಈ ಹಿಂದೆ ಪ್ರಚೋದನಾತ್ಮಕ ಭಾಷಣ ಮಾಡಿ ಟೀಕೆಗೆ ಗುರಿಯಾಗಿದ್ದರು. ಅಲ್ಲದೇ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸಂಸದ ಅಸಾದುದ್ದೀನ್ ಒವೈಸಿ ಅವರ ಎಐಎಂಐಎಂ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳವುದಾಗಿ ಸಿದ್ಧೀಖಿ ಘೋಷಣೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.


from India & World News in Kannada | VK Polls https://ift.tt/3e31BTk

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...