ಭಾರತದಲ್ಲಿ ಕೊರೊನಾ ಸ್ಫೋಟ: ಹಲವು ತಿಂಗಳ ಬಳಿಕ ಒಂದೇ ದಿನದಲ್ಲಿ 1 ಲಕ್ಷ ದಾಟಿದ ಕೊರೊನಾ ಕೇಸ್, ಎಷ್ಟು ಸಾವು?

ಹೊಸದಿಲ್ಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನ ನಿತ್ಯ ಹೆಚ್ಚುತ್ತಿದ್ದು ಇಂದು ದಾಖಲೆಯತ್ತ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಕೊರೊನಾ 2ನೇ ಅಲೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1 ಲಕ್ಷದ ಮೂರು ಸಾವಿರದ 558 ಹೊಸ ಕೊರೊನಾ ಪ್ರಕರಣ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಅಲ್ಲದೆ ಒಂದೇ ದಿನ 478 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಈ ಮೂಲಕ ಹಲವು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ದಾಖಲೆಯ ಸೋಂಕಿತರು ದೇಶದಲ್ಲಿ ಪತ್ತೆಯಾಗಿದ್ದಾರೆ. ಇನ್ನು ಸೋಂಕಿತರ ಸಂಖ್ಯೆ ಲಕ್ಷ ದಾಟುವ ಮೂಲಕ ದೇಶದಲ್ಲಿ ಇಲ್ಲಿಯವರೆಗೆ ಒಟ್ಟು 1 ಕೋಟಿಯ 25 ಲಕ್ಷದ 89 ಸಾವಿರದ 067 ಪ್ರಕರಣಗಳು ವರದಿಯಾಗಿದ್ದು, ಸದ್ಯ 7 ಲಕ್ಷದ 41 ಸಾವಿರದ 830 ಸಕ್ರಿಯ ಪ್ರಕರಣಗಳಿವೆ. 478 ಮಂದಿ ಸಾವನಪ್ಪುವ ಮೂಲಕ 1 ಲಕ್ಷದ 65 ಸಾವಿರದ 101 ಮಂದಿ ಈವರೆಗೆ ಬಲಿಯಾದಂತೆ ಆಗಿದೆ. ಕಳೆದ 24 ಗಂಟೆಗಳಲ್ಲಿ 52,847 ಮಂದಿ ಗುಣಮುಖರಾಗಿದ್ದು, ದೇಶದಲ್ಲಿ ಈವರೆಗೆ ಒಟ್ಟಾರೆ 1,16,82,136 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಕಳೆದ ವರ್ಷ ಸೆಪ್ಟೆಂಬರ್ 17 ರ ನಂತರ ಒಂದು ದಿನದಲ್ಲಿ ಅತಿ ಹೆಚ್ಚು ಮಂದಿ ಸೋಂಕಿತರು ವರದಿಯಾಗಿದ್ದು ನಿನ್ನೆಯೇ ಆಗಿದೆ. ದೇಶದಲ್ಲಿ ಸದ್ಯ ಕೊರೊನಾ ಸೋಂಕು ಏರಿಕೆಯಾಗುತ್ತಲೇ ಇದ್ದಾರೆ. ದೇಶದಲ್ಲಿ ಒಟ್ಟಾರೆ ಈವರೆಗೆ ಶೇಕಡಾ 5.89 ಸೋಂಕಿತರಿದ್ದಾರೆ. ಕೊರೊನಾ ತಡೆಗೆ ದಶ ಸೂತ್ರ! ಹೊಸದಿಲ್ಲಿ: ದೇಶದಲ್ಲಿ ಕೋವಿಡ್‌-19 ಸಾಂಕ್ರಾಮಿಕ ಭೀತಿ ಉಲ್ಬಣಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಉನ್ನತ ಮಟ್ಟದ ಸಭೆ ನಡೆಸಿ ವಸ್ತುಸ್ಥಿತಿಯ ವರದಿ ಪಡೆದರು. ಈ ವೇಳೆ ಅತಿ ಹೆಚ್ಚು ಸೋಂಕಿನ ಪ್ರಕರಣಗಳು ದಾಖಲಾಗುತ್ತಿರುವ ರಾಜ್ಯಗಳಿಗೆ ಆದ್ಯತೆ ನೀಡಿ, ಐದು ಅಂಶಗಳ ಕಾರ್ಯತಂತ್ರವನ್ನು ಪಾಲಿಸುವಂತೆ ಸೂಚಿಸಿದ್ದಾರೆ. ಟೆಸ್ಟಿಂಗ್‌, ಟ್ರೇಸಿಂಗ್‌, ಟ್ರೀಟ್‌ಮೆಂಟ್‌, ಮುಂಜಾಗ್ರತಾ ಕ್ರಮಗಳ ಪಾಲನೆ ಮಾಸ್ಕ್‌ ಧಾರಣೆ, ತಪ್ಪದೇ ಲಸಿಕೆ ಪಡೆಯುವಿಕೆಯು ಪ್ರಧಾನಿ ಮಂಡಿಸಿದ ಕೊರೊನಾ ತಡೆಯ ಪಂಚ ಸೂತ್ರಗಳಾಗಿದ್ದು, ಈ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ರಾಜ್ಯ ಸರಕಾರಗಳಿಗೆ ಖಡಕ್‌ ನಿರ್ದೇಶನ ನೀಡಿದರು.


from India & World News in Kannada | VK Polls https://ift.tt/3cQJEXb

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...