ಬೆಂಗಳೂರು: ಡ್ರಗ್ಸ್‌ ಕೇಸ್‌ನಲ್ಲಿ ಇಬ್ಬರ ಬಂಧನ; 10 ಲಕ್ಷ ರೂ. ಮೌಲ್ಯದ ಮಾದಕವಸ್ತು ವಶ

ಬೆಂಗಳೂರು: ಮಾದಕವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 10 ಲಕ್ಷ ರೂ. ಮೌಲ್ಯದ ಎಕ್ಸ್‌ಟೆಸಿ ಟ್ಯಾಬ್ಲೆಟ್ಸ್‌, ಎಲ್‌ಎಸ್‌ಡಿ ಸ್ಟ್ರಿಫ್ಸ್‌ ವಶಪಡಿಸಿಕೊಂಡಿದ್ದಾರೆ. ಬನಶಂಕರಿ ಪೊಲೀಸ್‌ ಠಾಣೆ ವ್ಯಾಪ್ತಿಯ ಕೆ.ಆರ್‌.ರಸ್ತೆಯ ಅಕ್ಷ ಆಸ್ಪತ್ರೆ ಸಮೀಪ ಫುಟ್‌ಪಾತ್‌ ಮೇಲೆ ಮಾದಕವಸ್ತು ಮಾರುತ್ತಿರುವ ಮಾಹಿತಿ ಸಿಕ್ಕಿತ್ತು. ಕಾರ್ಯಾಚರಣೆ ನಡೆಸಿದ ಸಿಸಿಬಿ ಮಾದಕದ್ರವ್ಯ ನಿಗ್ರಹ ದಳದ ತಂಡ, ಜಯನಗರ ನಿವಾಸಿ ಜಿದಾನೆ ಸೌದ್‌(23) ಮತ್ತು ಬನಶಂಕರಿ ನಿವಾಸಿ ನಾಗರಾಜ್‌ ರಾವ್‌(22) ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ 100 ಎಕ್ಸ್‌ಟೆಸಿ ಮಾತ್ರೆಗಳು, 100 ಎಲ್‌ಎಸ್‌ಟಿ ಸ್ಟ್ರಿಫ್ಸ್‌, 2 ಮೊಬೈಲ್‌ ಫೋನ್‌ಗಳು ಪತ್ತೆಯಾಗಿವೆ. ಡ್ರಗ್ಸ್‌ ಪೆಡ್ಲರ್‌ಗಳಾದ ಅನೂಜ್‌ ಮತ್ತು ಹರ್ಷವರ್ಧನ್‌ ಎಂಬುವರ ಕಡೆಯಿಂದ ಕಡಿಮೆ ಬೆಲೆಗೆ ಖರೀದಿಸಿ, ಮಾರಾಟ ಮಾಡುತ್ತಿದ್ದೆವು ಎಂದು ವಿಚಾರಣೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ತಲೆಮರೆಸಿಕೊಂಡ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಸಿಸಿಬಿ ತಿಳಿಸಿದೆ.


from India & World News in Kannada | VK Polls https://ift.tt/3wpvvI6

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...