ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಪ್ರೀತಿಸುವ ನೆಪದಲ್ಲಿ ಬಾಲಕಿಯನ್ನು ಕರೆದೊಯ್ದು ಆಕೆಯ ಮೇಲೆ ಎಸಗಿದ್ದ ಆರೋಪಿಗೆ ನಗರದ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ನಗರದ ಅಬ್ದುಲ್‌ ಜುನೈದ್‌ ಶಿಕ್ಷೆಗೆ ಒಳಗಾಗಿರುವ ಅಪರಾಧಿ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ. ಕೆ ಕೋಮಲಾ, ಆರೋಪಿಯ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಆರೋಪಿ ವೈಯಾಲಿಕಾವಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದ ಬಾಲಕಿಯನ್ನು ಪ್ರೀತಿಸುತ್ತಾ, ಆಕೆಯೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದ. ಪೋಷಕರು ಆಗಾಗ್ಗೆ ಕರೆ ಮಾಡಿ ಮಗಳೊಂದಿಗೆ ಮಾತನಾಡದಂತೆ ಎಚ್ಚರಿಕೆ ನೀಡಿದ್ದರು. ಆದರೂ, 2017ರ ಏ.12ರಂದು ಬಾಲಕಿಯನ್ನು ಬಳ್ಳಾರಿಯ ಹೂವಿನಹಡಗಲಿಗೆ ಕರೆದೊಯ್ದಿದ್ದ ಅಬ್ದುಲ್‌ ಜುನೈದ್‌ ಸಂಬಂಧಿಕರ ಮನೆಯಲ್ಲಿಇರಿಸಿಕೊಂಡಿದ್ದ. ಆ ವೇಳೆ ಮದುವೆಯಾಗುವುದಾಗಿ ನಂಬಿಸಿ ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಸಂಪರ್ಕ ನಡೆಸಿದ್ದನು ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಬಾಲಕಿಯ ಪೋಷಕರು ವೈಯಾಲಿಕಾವಲ್‌ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದರು. ಪೊಲೀಸರು, ಆರೋಪಿ ಅಬ್ದುಲ್‌ ಜುನೈದ್‌ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 366(ಎ) 376 ಹಾಗೂ ಪೋಕ್ಸೋ ಕಾಯಿದೆಯ ಸೆಕ್ಷನ್‌ 4, 5, ಮತ್ತು 6 ಅಡಿ ಪ್ರಕರಣ ದಾಖಲಿಸಿ, ನಗರದ 51ನೇ ಸಿಟಿ ಸಿವಿಲ್‌ ಆ್ಯಂಡ್‌ ಸೆಷನ್ಸ್‌ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದರು. ಸರಕಾರಿ ಅಭಿಯೋಜಕಿ ಕೆ.ಎಸ್‌ ವೀಣಾ, ಆರೋಪಿಗೆ ಶಿಕ್ಷೆ ವಿಧಿಸಲೇಬೇಕೆಂದು ಪ್ರಬಲ ವಾದ ಮಂಡಿಸಿದ್ದರು.


from India & World News in Kannada | VK Polls https://ift.tt/3ejZJUP

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...