ರಾಯ್ಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 15 ಮಂದಿ ನಾಪತ್ತೆಯಾಗಿದ್ದಾರೆಂದು ವರದಿಯಾಗಿದೆ. ಟರ್ರೆಮ್ ಅರಣ್ಯ ಪ್ರದೇಶದಲ್ಲಿ ನಕ್ಸಲರ ಇರುವಿಕೆ ಕುರಿತು ಮಾಹಿತಿ ಕಲೆಹಾಕಿದ್ದ ನಕ್ಸಲ್ ನಿಗ್ರಹ ಪಡೆ ಸಿಆರ್‌ಪಿಎಫ್ ಯೋಧರೊಂದಿಗೆ ಜಂಟಿ ಕಾರ್ಯಾಚರಣೆಗೆ ಇಳಿದಿತ್ತು. ಸಿಆರ್ ಪಿಎಫ್ ನ ಕೋಬ್ರಾ ತಂಡ ಮತ್ತು ಜಿಲ್ಲಾ ಮೀಸಲು ಸಶಸ್ತ್ರಪಡೆ ಜಂಟಿ ಕಾರ್ಯಾಚರಣೆ ನಡೆಸಿದ್ದು, ನಕ್ಸಲರ ಅಡಗುತಾಣದ ಮೇಲೆ ಭದ್ರತಾ ಪಡೆ ನುಗ್ಗುತ್ತಲೇ ಎಚ್ಚೆತ್ತ ಗುಂಡಿನ ಸುರಿಮಳೆ ಗೈದಿದ್ದರು. ಭದ್ರತಾಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಈ ಭಾರೀ ಗುಂಡಿನ ಕಾಳಗದಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, ಐವರು ಯೋಧರ ಪೈಕಿ ಇಬ್ಬರು ಯೋಧರ ಮೃತದೇಹಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದೆ. ಈ ನಡುವೆ ಕಾರ್ಯಾಚರಣೆ ಬಳಿಕ 15 ಮಂದಿ ಯೋಧರು ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿದ್ದು, ಕಾರ್ಯಾಚರಣೆ ನಡೆದ ಸ್ಥಳಕ್ಕೆ ದೌಡಾಯಿರುವ ಭದ್ರತಾ ಪಡೆಗಳು ತೀವ್ರ ಹುಡುಕಾಟ ಆರಂಭಿಸಿದ್ದಾರೆ. ಈ ನಡುವೆ ನಿನ್ನೆ ನಡೆದ ಗುಂಡಿನ ಕಾಳಗದಲ್ಲಿ ಗಾಯಗೊಂಡಿದ್ದ ಯೋಧರು ಸೇರಿದಂತೆ 23 ಮಂದಿ ಗಾಯಗೊಂಡಿದ್ದು ಅವರನ್ನು ಬಿಜಾಪುರ ಆಸ್ಪತ್ರೆಗೆ ಹಾಗೂ 7 ಮಂದಿಯನ್ನು ರಾಯ್ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಛತ್ತೀಸ್‌ಗಢ ಪೊಲೀಸರು ಮಾಹಿತಿ ನೀಡಿದ್ದಾರೆ. ಮಾವೋವಾದಿಗಳ ವಿರುದ್ಧ ಹೋರಾಡುವಾಗ ಹುತಾತ್ಮರಾದವರ ಕುಟುಂಬಗಳೊಂದಿಗೆ ನಮ್ಮ ಪ್ರಾರ್ಥನೆ ಇರಲಿದೆ. ಧೈರ್ಯಶಾಲಿ ಹುತಾತ್ಮರ ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಇನ್ನು ಗೃಹ ಸಚಿವ ಅಮಿತ್ ಶಾ ಕೂಡ ಹುತಾತ್ಮ ಯೋಧರ ತ್ಯಾಗವನ್ನು ಸ್ಮರಿಸಿದ್ದಾರೆ.
from India & World News in Kannada | VK Polls https://ift.tt/31R0m29