ಕೋವಿಡ್‌ 19 ಮಾರ್ಗಸೂಚಿ: ಉಪಚುನಾವಣೆಯಲ್ಲೂ ಪಾಲನೆ ಆಗುತ್ತಾ ನಿಯಮ?

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿದೆ. ಈ ನಡುವೆ ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಉಪಚುನಾವಣೆ ಕಾವು ತೀವ್ರಗೊಳ್ಳುತ್ತಿದೆ. ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಆದರೆ ಈ ಮಾರ್ಗಸೂಚಿ ಮೂರು ಕ್ಷೇತ್ರಗಳ ಉಪಚುನಾವಣೆ ಪ್ರಚಾರದಲ್ಲಿ ಎಷ್ಟರ ಮಟ್ಟಿಗೆ ಪಾಲನೆ ಆಗಲಿದೆ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ. ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಮತ್ತೊಂದು ಕಡೆಯಲ್ಲಿ ಪಂಚರಾಜ್ಯಗಳ ಚುನಾವಣಾ ಪ್ರಚಾರ ಭರದಿಂದ ಸಾಗುತ್ತಿದೆ. ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದಲ್ಲಿ ಕರ್ನಾಟಕ ರಾಜಕೀಯ ಪಕ್ಷಗಳ ಮುಖಂಡರು ಭಾಗಿಯಾಗುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರಂತೆ ಶಾಲೆ ಮುಚ್ಚಲಾಗಿದ್ದು, ಚಿತ್ರಮಂದಿರ, ಪಬ್‌, ರೆಸ್ಟೋರೆಂಟ್‌ಗಳಲ್ಲೂ ನಿರ್ಬಂಧ ಹೇರಲಾಗಿದೆ. ಇದಕ್ಕೆ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಇಂತಹ ಸಂದರ್ಭದಲ್ಲಿ ಉಪಚುನಾವಣಾ ಪ್ರಚಾರ ಭರದಿಂದ ಸಾಗುತ್ತಿದೆ. ದೊಡ್ಡ ಮಟ್ಟದಲ್ಲಿ ಸಭೆ ಸಮಾರಂಭಗಳು ನಡೆಯುತ್ತಿವೆ. ಆದರೆ ಇಲ್ಲಿ ಮಾರ್ಗಸೂಚಿ ಪಾಲನೆಗೆ ಕ್ರಮ ಏನು ಎಂಬ ಪ್ರಶ್ನೆಯನ್ನು ಜನಸಾಮಾನ್ಯರು ಕೇಳುತ್ತಿದ್ದಾರೆ. ನಿಮಯಗಳನ್ನು ಜನಸಾಮಾನ್ಯರ ಮೇಲೆ ಹೇರುವುದಕ್ಕಿಂದ ಮೊದಲು ರಾಜಕೀಯ ಪಕ್ಷಗಳು ಇದನ್ನು ಪಾಲನೆ ಮಾಡಿ ಮಾದರಿಯಾಗಲಿ ಎಂಬುವುದು ಜನರ ಅಭಿಪ್ರಾಯವಾಗಿದೆ. ಆದರೆ ಇದನ್ನು ರಾಜಕೀಯ ಪಕ್ಷಗಳು ಹೇಗೆ ತೆಗೆದುಕೊಳ್ಳಲಿದೆ ಎಂಬುವುದು ಸದ್ಯದ ಕುತೂಹಲ.


from India & World News in Kannada | VK Polls https://ift.tt/3dpD356

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...