ಇದೇ ಮೊದಲ ಬಾರಿಗೆ ಸಾರ್ವಕಾಲಿಕ ದಾಖಲೆ ಬರೆದ ಕೊರೊನಾ: 24 ಗಂಟೆಯಲ್ಲಿ 2.61ಲಕ್ಷ ಮಂದಿಗೆ ಸೋಂಕು, 1,501 ಸಾವು!

ಹೊಸದಿಲ್ಲಿ: ದೇಶದಲ್ಲಿ ಕೊರೊನಾ ಸೋಂಕು ಯಾವ ರೀತಿ ಅಬ್ಬರಿಸಿ ಬೊಬ್ಬಿರಿತಿದೆ ಎನ್ನುವುದಕ್ಕೆ ಸ್ಪಷ್ಟ ಉದಾಹರಣೆ ದೊರೆಯುತ್ತಿದೆ. ಕೊರೊನಾ ಆರಂಭವಾದಗಿನಿಂದಲೂ ಈವರೆಗೆ ಇದೇ ಮೊದಲ ಬಾರಿಗೆ ಅತೀ ಹೆಚ್ಚು ಪಾಸಿಟಿವ್‌ ಪ್ರಕರಣ ಧೃಢಪಟ್ಟಿದೆ. ದೇಶದಲ್ಲಿ ಇತಿಹಾಸದಲ್ಲೇ ಕೋವಿಡ್-19 ಸೋಂಕು ದಾಖಲೆ ಬರೆದಿದೆ, ಒಂದೇ ದಿನ ಬರೊಬ್ಬರಿ 2.61ಲಕ್ಷ ಮಂದಿಗೆ ಸೋಂಕು ವಕ್ಕರಿಸಿದೆ. ಇನ್ನು ಕಳೆದ 24 ಗಂಟೆಯಲ್ಲಿ 1,501 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2,61,500 ಸೋಂಕು ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ದೇಶದಲ್ಲಿನ ಒಟ್ಟು ಈ ವರೆಗೆ ಸೋಂಕಿತರ ಸಂಖ್ಯೆ 1,47,88,109ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 1,501 ಸೋಂಕಿತರು ಸಾವನ್ನಪ್ಪಿದ್ದು ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ ಈವರೆಗೆ ದೇಶದಲ್ಲಿ 1,77,150ಕ್ಕೆ ಏರಿಕೆಯಾದಂತೆ ಆಗಿದೆ. ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 15,66,394 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 26,65,38,416ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಅಂತೆಯೇ ಈ ವರೆಗೂ 12,26,22,590 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು ದೇಶದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಪ್ರಮುಖ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಕಠಿಣ ಕ್ರಮಗಳು ಜಾರಿಯಾಗುವ ಸಾಧ್ಯತೆ ಇದೆ.


from India & World News in Kannada | VK Polls https://ift.tt/3n8wyZ3

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...