ಕುಡಿಯಂಗಿಲ್ಲ, ಕುಣಿಯಂಗಿಲ್ಲ: ಮೇ.2ರ ಫಲಿತಾಂಶ ಸಂಭ್ರಮಾಚರಣೆ ನಿಷೇಧಿಸಿದ ಚುನಾವಣಾ ಆಯೋಗ!

ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಇದೇ ಮೇ.2(ಭಾನುವಾರ)ರಂದು ಘೋಷಣೆಯಾಗಲಿರುವ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಮತ್ತು ಕರ್ನಾಟಕದ ಉಪಚುನಾವಣೆ ಫಲಿತಾಂಶದ ವೇಳೆ, ಯಾವುದೇ ಸಂಭ್ರಮಾಚರಣೆ ಮಾಡದಂತೆ ತಾಕೀತು ಮಾಡಿದೆ. ಈ ಕುರಿತು ಆದೇಶ ಹೊರಡಿಸಿರುವ ಕೇಂದ್ರ ಚುನಾವಣಾ ಆಯೋಗ, ಯಾವುದೇ ರೀತಿಯ ವಿಜಯದ ಮೆರವಣಿಗೆ ನಡೆಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ದೇಶದಲ್ಲಿ ಹೆಚ್ಚುತ್ತಿರುವ ಸೋಂಕು ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದೂ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ . ಮತ ಎಣಿಕೆ ಸಮಯದಲ್ಲಿ ಮತ್ತು ಫಲಿತಾಂಶ ಘೋಷಣೆಯಾದ ಬಳಿಕ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಯಾವುದೇ ರೀತಿಯ ವಿಜಯದ ಮೆರವಣಿಗೆ ನಡೆಸುವಂತಿಲ್ಲ. ಮತ ಏಣಿಕೆ ಕೇಂದ್ರದಲ್ಲಿ ಅಭ್ಯರ್ಥಿಗಳ ಬೆಂಬಲಿಗರು ಸೇರುವಂತಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ. ಭಾರತದಲ್ಲಿ ಕೊರೊನಾ ವೈರಸ್ ಎರಡನೇ ಅಲೆ ಹೆಚ್ಚಾಗಲು ಚುನಾವಣಾ ಆಯೋಗವೇ ಕಾರಣ ಎಂದು ಮದ್ರಾಸ್ ಹೈಕೋರ್ಟ್ ಗುಡುಗಿರುವ ಬೆನ್ನಲ್ಲೇ, ಮೇ.02ರಂದು ವಿಜಯದ ಮೆರವಣಿಗೆ ನಡೆಸಬಾರದು ಎಂಬ ಮಹತ್ವದ ಆದೇಶವನ್ನು ಚುನಾವಣಾ ಆಯೋಗ ಹೊರಡಿಸಿದೆ. ಕೊರೊನಾ ವೈರಸ್ ಸೋಂಕು ಹೆಚ್ಚಾಗುತ್ತಿರುವ ನಡುವೆಯೂ ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಸಿದ ಚುನಾವಣಾ ಆಯೋಗದ ಕ್ರಮಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಮೇ.2ರಂದು ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಒಉಚುಚೇರಿ ಹಾಗೂ ತಮಿಳುನಾಡು ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಶ ಮತ್ತು ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಘೋಷಣೆಯಾಗಲಿದೆ ಎಂಬುದು ವಿಶೇಷ.


from India & World News in Kannada | VK Polls https://ift.tt/2PqGGjb

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...