ಹೊಸದಿಲ್ಲಿ: ಭಾರತದಲ್ಲಿ ಕೊರೊನಾದ ಎರಡನೇ ಅಲೆ ಅತೀ ಭೀಕರವಾಗುತ್ತಿರುವುದು ಸ್ಪಷ್ಟವಾಗುತ್ತಿದೆ. ಯಾಕೆಂದರೆ ಇಂದು ಕೊರೊನಾದ ಮಹಾಸ್ಪೋಟವೇ ಸಂಭವಿಸಿದೆ. ಹೌದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಸೋಂಕಿತರ ಸಂಖ್ಯೆ 3 ಲಕ್ಷದ ಗಡಿ ದಾಟಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು, ದೇಶದಲ್ಲಿ ಬುಧವಾರದ 24 ಗಂಟೆಗಳ ಅವಧಿಯಲ್ಲಿ 3,14,835 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,59,30,965ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,104 ಮಂದಿ ಸಾವನ್ನಪ್ಪಿದ್ದು, ಈವರೆಗೆ ದೇಶದಲ್ಲಿ ಸಾವಿನ ಸಂಖ್ಯೆ 1,84,657ಕ್ಕೆ ಏರಿಕೆಯಾದಂತೆ ಆಗಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 22,91,428 ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,78,841 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,34,54,880ಕ್ಕೆ ತಲುಪಿದೆ. ಇನ್ನು ದಿನ ನಿತ್ಯದ ಕೇಸ್‌ಗಳ ಪೈಕಿ ಜಗತ್ತಿನಲ್ಲೇ ಮೊದಲ ಸ್ಥಾನಕ್ಕೆ ಜಿಗಿದಿದೆ. ಅತೀ ಹೆಚ್ಚು ಸೋಂಕು ಭಾರತದಲ್ಲೇ ಪತ್ತೆಯಾಗುತ್ತಿರುವುದು ನಿಜಕ್ಕೂ ಕಳವಳ ಮೂಡಿಸಿದೆ. ಭಾರೀ ಸಂಖ್ಯೆಯಲ್ಲಿ ಪರೀಕ್ಷೆ ಹಾಗೂ ಲಸಿಕೆ ಇನ್ನು ದೇಶದಲ್ಲಿ ಒಂದೇ ದಿನ 16,51,711 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 27,27,05,103 ಮಂದಿಗೆ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಇನ್ನೊಂದೆಡೆ ದೇಶದಲ್ಲಿ ಅಭಿಯಾನ ಕೂಡ ಉತ್ತಮ ಮಟ್ಟದಲ್ಲಿ ಸಾಗುತ್ತಿದ್ದು ಒಟ್ಟಾರೆ ಈವರೆಗೆ 13,23,30,644 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರಕಾರ ಮಾಹಿತಿ ನೀಡಿದೆ. ಮೇ. 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಸಿಗಲಿದೆ.
from India & World News in Kannada | VK Polls https://ift.tt/3vdVwsr