ವಿವಾಹಕ್ಕೆಂದು ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದ ಮೈಸೂರಿನ ದಿಬ್ಬಣದ ಬಸ್‌ ಪಲ್ಟಿ: 30 ಮಂದಿ ಬಸ್‌ನಲ್ಲಿದ್ದರು!

ಕೊಕ್ಕಡ: ಮೈಸೂರಿನ ವಿಜಯ ನಗರದ ಕುಟುಂಬವೊಂದು ಧರ್ಮಸ್ಥಳದ ಕಲ್ಯಾಣ ಮಂಟಪವೊಂದರಲ್ಲಿ ನಿಗದಿಪಡಿಸಿದ್ದ ವಿವಾಹ ಕಾರ್ಯಕ್ರಮಕ್ಕೆ ವರನ ಕುಟುಂಬಿಕರನ್ನು ಕರೆ ತರುತ್ತಿದ್ದ ದಿಬ್ಬಣದ ಬಸ್‌ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಬೂಡುಜಾಲು ಶಾಂತಿನಗರ ಸಮೀಪ ಶನಿವಾರ ರಾತ್ರಿ ಪಲ್ಟಿಯಾಗಿ 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೈಸೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ದಿಬ್ಬಣದ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿ 30 ಮಂದಿ ಇದ್ದು, 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೂವರು ಮಕ್ಕಳ ಸಹಿತ ನಾಲ್ವರ ಸ್ಥಿತಿ ಗಂಭೀರವಾಗಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಉಜಿರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲು ಸಹಕರಿಸಿದ್ದಾರೆ. ವರ ಅಭಿಷೇಕ್‌ ಇದೇ ಬಸ್‌ನಲ್ಲಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆ ಹಾಗೂ ಪೊಲೀಸ್‌ ಠಾಣೆ ಸಿಬ್ಬಂದಿ ಭೇಟಿ ನೀಡಿದ್ದಾರೆ.


from India & World News in Kannada | VK Polls https://ift.tt/3fJxmld

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...