ಮಂಗಳೂರು: ಬಸ್‌ನಲ್ಲಿ ತೆರಳುತ್ತಿದ್ದ ಯುವಕ-ಯುವತಿಗೆ ಹಲ್ಲೆ; 8 ಮಂದಿ ಗೂಂಡಾಗಳು ಖಾಕಿ ವಶಕ್ಕೆ

: ಮಂಗಳೂರಿನಿಂದ ಬೆಂಗಳೂರಿಗೆ ಖಾಸಗಿ ಬಸ್‌ನಲ್ಲಿ ತೆರಳುತ್ತಿದ್ದ ಯುವಕ-ಯುವತಿಗೆ ಗುರುವಾರ ರಾತ್ರಿ ತಂಡವೊಂದು ಹಲ್ಲೆ ನಡೆಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ನಗರ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೋಕಟ್ಟೆ ನಿವಾಸಿ ಮಹಮ್ಮದ್‌ ಹರ್ಷಿದ್‌ ಅನ್ವರ್‌ (23) ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಯುವಕ. ಪ್ರಕರಣಕ್ಕೆ ಸಂಬಂಧಿಸಿ ನಗರ ಪೊಲೀಸ್‌ ಕಮಿಷನರ್‌ ಎನ್‌. ಶಶಿಕುಮಾರ್‌ ಮಾಧ್ಯಮದ ಜತೆ ಮಾತನಾಡಿ, ಪದವಿ ವ್ಯಾಸಂಗ ನಡೆಸಿದ ಯುವಕ ಮತ್ತು ಯುವತಿ ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಲು ನಿರ್ಧರಿಸಿ ನಗರದ ಕೆಎಸ್ಸಾರ್ಟಿಸಿ ಬಳಿ ಖಾಸಗಿ ಬಸ್‌ ಹತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸಂಘಟನೆ ಕಾರ್ಯಕರ್ತರು ಪಂಪ್‌ವೆಲ್‌ ಬಸ್‌ ನಿಲ್ಲಿಸಿ, ಬಸ್‌ನಲ್ಲಿದ್ದ ಯುವಕ-ಯುವತಿಯನ್ನು ಕೆಳಗೆ ಇಳಿಸಿ ಯುವಕನಿಗೆ ಮಾರಕಾಯುಧದಿಂದ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭ ತಡೆಯಲು ಬಂದ ಯುವತಿಗೂ ಹಲ್ಲೆಗೈದಿದ್ದಾರೆಂದು ತಿಳಿದು ಬಂದಿದೆ. ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದರು. 8 ಮಂದಿ ವಶಕ್ಕೆ: ಘಟನೆಗೆ ಸಂಬಂಧಿಸಿ ಮಾಹಿತಿ ಪಡೆದ ಪೊಲೀಸ್‌ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ತೆರಳಿ 8 ಮಂದಿ ಬೀದಿಗೂಂಡಾಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ. ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಆಯ್ದ ಸ್ಥಳಗಳಲ್ಲಿ ಸಿಬ್ಬಂದಿ ಗಸ್ತುಯುವಕ-ಯುವತಿಯರ ಮೇಲೆ ಅನ್ಯಕೋಮಿನ ಕಾರಣಕ್ಕೆ ಈ ಹಿಂದೆಯೂ ಇಂತಹ ಘಟನೆ ನಡೆದಿದೆ. ಆದರೆ ಹಲ್ಲೆಯ ಹಂತಕ್ಕೆ ತಲುಪಿರಲಿಲ್ಲ. ಈ ಬಾರಿಯ ಹಲ್ಲೆ ಘಟನೆಯನ್ನು ಗಂಭೀರ ಪರಿಗಣಿಸಲಾಗಿದೆ. ಸಂಜೆ ಹಾಗೂ ರಾತ್ರಿ ಹೊತ್ತು ಗಸ್ತು ಮತ್ತು ಅಬ್ಬಕ್ಕ ಪಡೆಯನ್ನು ಬಸ್‌ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ನಿಯೋಜಿಸುವ ಮೂಲಕ ಅಹಿತಕರ ಘಟನೆಗೆ ಆಸ್ಪದ ನೀಡದಂತೆ ನಿಗಾ ವಹಿಸಲಾಗುವುದು ಎಂದು ಕಮಿಷನರ್‌ ಶಶಿಕುಮಾರ್‌ ತಿಳಿಸಿದರು.


from India & World News in Kannada | VK Polls https://ift.tt/3fzcehz

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...