ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ವಿರುದ್ಧ ರಾಜ್ಯಪಾಲರಿಗೆ ಸಚಿವ ಕೆ.ಎಸ್ ಈಶ್ವರಪ್ಪ ದೂರು ನೀಡಿರುವ ಹಿನ್ನೆಲೆಯಲ್ಲಿ ರಾಜೀನಾಮೆ ಕೊಟ್ಟು ಸ್ವಾಭಿಮಾನ ಪ್ರದರ್ಶಿಸಿ ಎಂದು ಸವಾಲು ಹಾಕಿದೆ. ದೂರು ನೀಡಿದ್ದರಿಂದ ಆಕ್ರೋಶಿತರಾಗಿರುವ ಸಿಎಂ ಯಡಿಯೂರಪ್ಪ, ಈಶ್ವರಪ್ಪನವರನ್ನು ಸಂಪುಟದಿಂದ ಕಿತ್ತುಹಾಕಲು ಹೆದರಲ್ಲ ಎಂದು ಆಪ್ತರ ಬಳಿ ಹೇಳಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಈಶ್ವರಪ್ಪನವರೇ, ಗುಲಾಮರಂತೆ ಸಚಿವರಾಗಿರುವುದಕ್ಕಿಂತ, ರಾಜೀನಾಮೆ ಕೊಟ್ಟು ಸ್ವಾಭಿಮಾನ ಪ್ರದರ್ಶಿಸಿ ಎಂದಿದೆ. ಅಲ್ಲದೆ ಯಡಿಯೂರಪ್ಪನವರು ,ಯತ್ನಾಳ್‌ರ ವಿರುದ್ಧ ಕ್ರಮ ಕೈಗೊಳ್ಳದೆ ಕೈಲಾಗದ ಸಿಎಂ ಎನಿಸಿಕೊಂಡಿದ್ದೀರಿ, ಈಶ್ವರಪ್ಪನವರನ್ನಾದರೂ ಸಂಪುಟದಿಂದ ಹೊರದಬ್ಬಿ ನಿಮ್ಮ ತಾಕತ್ತು ಪ್ರದರ್ಶಿಸಿ! ಇದಾಗುವುದಿಲ್ಲವೆಂದರೆ ನೆಟ್ಟಗೆ ಆಡಳಿತ ನಡೆಸಿಕೊಂಡು ಹೋಗಿ ಎಂದು ಕಿಡಿಕಾರಿದೆ. ಬಿಜೆಪಿಯಲ್ಲಿ ಯಡಿಯೂರಪ್ಪ ವರ್ಸಸ್ ಈಶ್ವರಪ್ಪ ಸಂಘರ್ಷ ತಾರಕಕ್ಕೇರಿದ್ದು ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಿಎಂ ಯಡಿಯೂರಪ್ಪನವರ ವಿರುದ್ಧ ಕೆಎಸ್ ಈಶ್ವರಪ್ಪ ರಾಜ್ಯಪಾಲರಿಗೆ ಹಾಗೂ ವರಿಷ್ಠರಿಗೆ ದೂರು ನೀಡಿದ್ದಾರೆ. ಪತ್ರದ ಮೂಲಕ ದೂರು ನೀಡಿರುವ ಅವರು ಹಲವು ವಿಚಾರಗಳನ್ನು ಉಲ್ಲೇಖಿಸಿದ್ದಾರೆ. ಈಶ್ವರಪ್ಪ ಬರೆದಿರುವ ಪತ್ರ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿದೆ. ಇದೀಗ ವರಿಷ್ಠರು ಮಧ್ಯ ಪ್ರವೇಶ ಮಾಡಿದ್ದು ಇಬ್ಬರು ನಾಯಕರ ನಡುವಿನ ಸಂಘರ್ಷವನ್ನು ಸರಿಪಡಿಸುವ ಪ್ರಯತ್ನದಲ್ಲಿದ್ದಾರೆ.
from India & World News in Kannada | VK Polls https://ift.tt/39DZa6E