ಬೆಂಗಳೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ವಿಚಾರಣೆಗೆ ಗೈರು ಹಾಜರಾಗಿದ್ಯಾರೆ. ಅವರು ಕೋವಿಡ್‌ಗೆ ಚಿಕಿತ್ಸೆ ಪಡೆದು ಮನೆ ಕ್ವಾರಂಟೈನ್‌ನಲ್ಲಿದ್ದಾರೆ. ಹೀಗಾಗಿ, ಏ.20ರಂದು ವಿಚಾರಣೆಗೆ ಹಾಜರಾಗಲು ವಿಶೇಷ ತನಿಖಾ ತಂಡದಿಂದ ನೋಟಿಸ್ ನೀಡಲಾಗಿತ್ತು. ಆದರೆ, ವಿಚಾರಣೆಗೆ ಗೈರು ಹಾಜರಾದ ರಮೇಶ್, ಪತ್ರ ಕಳುಹಿಸಿದ್ದಾರೆ. ‘ವೈದ್ಯರು ಕ್ವಾರಂಟೈನ್‌ನಲ್ಲಿರಲು ಸೂಚಿಸಿದ್ದಾರೆ. ಹೀಗಾಗಿ, ವಿಚಾರಣೆಗೆ ಹಾಜರಾಗಲು ಮತ್ತಷ್ಟು ಕಾಲಾವಕಾಶ ನೀಡಬೇಕು’ ಎಂದು ಎಸ್‌ಐಟಿ ತನಿಖಾಧಿಕಾರಿಗೆ ತಲುಪಿಸಿರುವ ಪತ್ರದಲ್ಲಿ ತಿಳಿಸಿದ್ದಾರೆ. ಅಧಿಕಾರಿಗೆ ಸೋಂಕು: ಎಸ್‌ಐಟಿ ತಂಡದ ಅಧಿಕಾರಿಯೊಬ್ಬರಿಗೆ ಕೋವಿಡ್ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ. ಅಧಿಕಾರಿ ಆರೋಗ್ಯವಾಗಿದ್ದು ಅವರ ಪ್ರಾಥಮಿಕ ಸಂಪರ್ಕಿತರು ಕ್ಯಾರಂಟೈನ್‌ನಲ್ಲಿದ್ದಾರೆ.
from India & World News in Kannada | VK Polls https://ift.tt/32ydc68