ಕೋವಿಡ್‌ನಿಂದ ಗುಣಮುಖ, ಮಣಿಪಾಲ್‌ ಆಸ್ಪತ್ರೆಯಿಂದ ಬಿಎಸ್‌ವೈ ಡಿಸ್ಚಾರ್ಜ್

ಬೆಂಗಳೂರು: ಕೋವಿಡ್‌ ಸೋಂಕು ಪಾಸಿಟಿವ್‌ ಆಗಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ ಗುರುವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಬಿಎಸ್‌ ಯಡಿಯೂರಪ್ಪ ಅವರಿಗೆ ಗುರುವಾರ ಕೋವಿಡ್‌ ಟೆಸ್ಟ್ ವರದಿ ನೆಗೆಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಯಿಂದ ಗುರುವಾರ ಬೆಳಗ್ಗೆ 11 ಗಂಟೆಗೆ ಡಿಸ್ಚಾರ್ಜ್ ಆದರು. ಸಾಕಷ್ಟು ಲವಲವಿಕೆಯಿಂದಲೇ ಆಸ್ಪತ್ರೆಯಿಂದ ಹೊರಬಂದ ಅವರು ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದ ಸಲ್ಲಿಸಿದರು. ಬೆಳಗಾವಿ ಉಪಚುನಾವಣಾ ಪ್ರಚಾರದ ಸಂದರ್ಭದಲ್ಲಿ ಯಡಿಯೂರಪ್ಪ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ತೀವ್ರ ಜ್ವರದ ಹಿನ್ನೆಲೆಯಲ್ಲಿಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಈ ಸಂದರ್ಭದಲ್ಲಿ ನಡೆದ ಕೋವಿಡ್ ತಪಾಸಣೆಯಲ್ಲಿ ಅವರಿಗೆ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಈ ಹಿಂದೆಯೂ ಯಡಿಯೂರಪ್ಪ ಅವರಿಗೆ ಕೋವಿಡ್‌ ಸೋಂಕು ತಗುಲಿತ್ತು. ಆ ಸಂದರ್ಭದಲ್ಲೂ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಇದೀಗ ಎರಡನೇ ಬಾರಿ ಅವರಿಗೆ ಕೋವಿಡ್‌ ಕಾಣಿಸಿಕೊಂಡಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಸಂದರ್ಭದಲ್ಲೂ ಅವರು ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗಿದ್ದರು. ವರ್ಚುವಲ್ ಮೂಲಕ ಸರ್ವಪಕ್ಷಗಳ ಸಭೆಯಲ್ಲಿ ಭಾಗಿಯಾಗಿದ್ದರು. ಅಲ್ಲದೆ ಹಿರಿಯ ಅಧಿಕಾರಿಗಳ ಜೊತೆಗೆ ಬುಧವಾರವೂ ಸಭೆಯನ್ನು ನಡೆಸಿದ್ದರು.


from India & World News in Kannada | VK Polls https://ift.tt/2QeD2JR

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...