ಹೊಸದಿಲ್ಲಿ: ದೇಶದಲ್ಲಿ ದಿನ ನಿತ್ಯ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡುಬರುತ್ತಿದೆ. ಕೊರೊನಾದಿಂದ ಜನರು ಸಾವನಪ್ಪುತ್ತಿರುವ ಸಂಖ್ಯೆಯಲ್ಲೂ ಏರುತ್ತಿದೆ. ಈ ಹಿನ್ನೆಲೆ ಈಗಾಗಲೇ ಕೆಲವು ರಾಜ್ಯಗಳು ನೈಟ್‌ಕರ್ಫ್ಯೂ, ಒಂದು ದಿನಗಳ ಲಾಕ್‌ಡೌನ್ ಮೊರೆ ಹೋಗಿವೆ. ಈ ಮಧ್ಯೆ ಇದೀಗ ಅವರು ಉನ್ನತ ಮಟ್ಟದ ಕರೆದಿದ್ದಾರೆ. ಕೋವಿಡ್ ಸಂಬಂಧಿತ ಸಮಸ್ಯೆಗಳು ಮತ್ತು ಲಸಿಕೆ ಅಭಿಯಾನದ ಬಗ್ಗೆ ಉನ್ನತ ಅಧಿಕಾರಿಗಳಿಂದ ಪ್ರಧಾನಿ ಮೋದಿ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಕೋವಿಡ್ ತಡೆಯುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಮೋದಿ ಸಭೆ ಮೂಲಕ ಅವಲೋಕನ ನಡೆಸಲಿದ್ದಾರೆ. ಸಭೆಯಲ್ಲಿ ಕ್ಯಾಬಿನೆಟ್ ಕಾರ್ಯದರ್ಶಿ, ಮೋದಿಯವರ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಕಾರ್ಯದರ್ಶಿಗಳು ಸೇರಿದಂತೆ ಎಲ್ಲಾ ಉನ್ನತ ಅಧಿಕಾರಿಗಳು ಭಾಗವಹಿಸಿದ್ದಾರೆ. ಅಲ್ಲದೇ ರಾಜ್ಯಗಳ ಪರಿಸ್ಥಿತಿ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಹೀಗಾಗಿ ಕೊರೊನಾ ಸಂಬಂಧ ಇನ್ನಷ್ಟು ಬಿಗಿ ನಿಯಮಗಳು ಜಾರಿಯಾಗುವ ಸಾಧ್ಯತೆ ಇದೆ. ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 93,249 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 513 ಮಂದಿ ಮೃತಪಟ್ಟಿದ್ದಾರೆ. ಸದ್ಯ ಸಭೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ದೊರಕಬೇಕಷ್ಟೆ. ಕರ್ನಾಟಕದಲ್ಲೂ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆ ಕಠಿಣ ಕ್ರಮಕೈಗೊಳ್ಳಲಾಗಿದೆ.
from India & World News in Kannada | VK Polls https://ift.tt/31MADYI