ದೇಶದ ಪ್ರತಿ ಜಿಲ್ಲೆಯಲ್ಲೂ ಆಕ್ಸಿಜನ್ ಉತ್ಪಾದನಾ ಘಟಕ: ಪ್ರಧಾನಿ ಮೋದಿ ಘೋಷಣೆ

ಹೊಸ ದಿಲ್ಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ತೀವ್ರಗೊಂಡಿರುವ ಜೊತೆಯಲ್ಲೇ ದೇಶಾದ್ಯಂತ ಆಮ್ಲಜನಕದ ಕೊರತೆಯೂ ಉಂಟಾಗಿದೆ. ಹೀಗಾಗಿ, ಈ ಅಭಾವ ನೀಗಿಸಲು ಕೇಂದ್ರ ಸರ್ಕಾರ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಈ ಸಂಬಂಧ ಟ್ವೀಟ್ ಮಾಡಿದ್ದು, ದೇಶದ ಪ್ರತಿ ಜಿಲ್ಲೆಯಲ್ಲೂ ಉತ್ಪಾದನಾ ನಿರ್ಮಾಣಕ್ಕೆ ಮುಂದಾಗಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ. ದೇಶದಲ್ಲಿ ಉತ್ಪಾದನೆ ಹೆಚ್ಚಿಸುವ ಸಲುವಾಗಿ ಈ ಮಹತ್ವದ ಕ್ರಮ ಕೈಗೊಂಡಿರೋದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ಪಿಎಂ ಕೇರ್ಸ್ ನಿಧಿ ಬಳಸಿಕೊಂಡು ದೇಶದ ಒಟ್ಟು 551 ಕಡೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಪ್ರತಿ ಜಿಲ್ಲೆಯ ಜಿಲ್ಲಾ ಕೇಂದ್ರದಲ್ಲಿ ಈ ಘಟಕ ನಿರ್ಮಾಣ ಆಗಲಿದೆ. ಆದಷ್ಟು ಬೇಗ ಈ ಘಟಕಗಳು ಕಾರ್ಯಾರಂಭ ಮಾಡಲಿವೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ಪ್ರತಿ ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗುವ ಈ ಘಟಕಗಳು ಜಿಲ್ಲಾದ್ಯಂತ ಆಮ್ಲಜನಕದ ತಡೆರಹಿತ ಸರಬರಾಜಿಗೆ ನೆರವಾಗಲಿದೆ. ಯಾವುದೇ ರೀತಿಯಲ್ಲೂ ಕೊರತೆ ಆಗದ ರೀತಿಯಲ್ಲಿ ಪಿಎಂ ಕೇರ್ಸ್‌ ನಿಧಿಯಿಂದ ಘಟಕ ನಿರ್ಮಾಣಕ್ಕೆ ಅನುದಾನ ನೀಡಲು ನಿರ್ಧರಿಸಲಾಗಿದೆ. ಈ ಘಟಕಗಳ ನಿರ್ಮಾಣಕ್ಕಾಗಿ ಈ ವರ್ಷ ಒಟ್ಟು 201.58 ಕೋಟಿ ರೂ. ನಿಗದಿಪಡಿಸಲಾಗಿದೆ.


from India & World News in Kannada | VK Polls https://ift.tt/3xmOQKD

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...