‘ಸಿಎಂಗೆ ಪಾಠ ಮಾಡಲು ನೀವು ಹೆಡ್‌ಮಾಸ್ಟರ್‌ ಅಲ್ಲ, ಮೊದಲು ರಾಜ್ಯಗಳ ಬೇಡಿಕೆ ಈಡೇರಿಸಿ’; ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ರೋಗ ನಿಯಂತ್ರಣ ಮಾಡುವಲ್ಲಿ ವಿಫಲವಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪದೇ ಪದೇ ಆಕ್ರೋಶ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ‘ಪ್ರಧಾನಿ‌ ಅವರೇ, ಪರದೆಯಲ್ಲಿ ಮತ್ತೆಮತ್ತೆ ಮುಖ ತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲ,‌ ಆಗಾಗ‌ ಮುಖ್ಯಮಂತ್ರಿಗಳಿಗೆ ಪಾಠ‌ ಮಾಡಲು ನೀವು ಹೆಡ್‌ಮಾಸ್ಟರ್ ಕೂಡಾ ಅಲ್ಲ. ಮೊದಲು ರಾಜ್ಯಗಳ ಬೇಡಿಕೆಗಳನ್ನು ಈಡೇರಿಸಿ ಕೊರೊನಾ ವೈರಸ್ ನಿಯಂತ್ರಿಸಿ ಎಂದು ಆಗ್ರಹಿಸಿದ್ದಾರೆ. ಅಲ್ಲದೇ ಪ್ರತಿಯೊಂದು ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕ ಇಲ್ಲದೆ ಸಾಯುತ್ತಿದ್ದಾರೆ. ಆಮ್ಲಜನಕ ಪೂರೈಕೆ ಮಾಡಿ‌ ಎಂದರೆ ಅಕ್ರಮ ದಾಸ್ತಾನು‌ ಮಾಡಿದವರ ಮೇಲೆ ಕ್ರಮಕೈಗೊಳ್ಳಿ ಎಂದು ಕರೆ ನೀಡುತ್ತೀರಿ. ನೀವೇನು ರಾಜ್ಯಗಳ‌ ಅನುಮತಿ ಪಡೆದು ಆಮ್ಲಜನಕ ರಪ್ತು ಮಾಡಿದ್ದೀರಾ ಮೋದಿಯವರೇ? ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ, ಬೆಂಗಳೂರಿನ ಖಾಸಗಿ/ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಮೀಸಲಾದ ಹಾಸಿಗೆಗಳು 7621, ಭರ್ತಿಯಾಗಿರುವುದು 6123, ಲಭ್ಯ ಇರುವುದು 1487. ನಿತ್ಯ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆ 15ಸಾವಿರಕ್ಕೂ ಹೆಚ್ಚು. ಈ ವಾಸ್ತವವನ್ನು ಮುಖ್ಯಮಂತ್ರಿಗಳು ನಿಮಗೇನಾದರೂ ತಿಳಿಸಿದ್ದಾರೆಯೇ ಪ್ರಧಾನಿಗಳೇ? ಎಂದು ಪ್ರಶ್ನಿಸಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಶೇ 65ರಷ್ಟು ಸಾಮಾನ್ಯ ಹಾಸಿಗೆ, ಶೇ 96ರಷ್ಟು ಬಹು ಅವಲಂಬನೆಯ ಹಾಸಿಗೆ, ಶೇ 98ರಷ್ಟು ಐಸಿಯು ಹಾಸಿಗೆ ಮತ್ತು ಶೇ 97ರಷ್ಟು ವೆಂಟಿಲೇಟರ್ ಹಾಸಿಗೆ ಭರ್ತಿಯಾಗಿವೆ. ನಿತ್ಯ 15 ಸಾವಿರಕ್ಕೂ ಹೆಚ್ಚು ಸೋಂಕಿತರು ಆಸ್ಪತ್ರೆ ಎದುರು ಕ್ಯೂ ನಿಲ್ಲುತ್ತಿದ್ದಾರೆ. ಅವರದ್ದೇನು ಗತಿ ಪ್ರಧಾನಿಯವರೇ? 'ಪರಿಸ್ಥಿತಿ ಕೈಮೀರಿಹೋಗಿದೆ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜನತೆಯ ಮುಂದೆ ಗೋಳಾಡುತ್ತಿರುವುದರಿಂದ ಪ್ರಶ್ನೆ ನಿಮ್ಮನ್ನೇ ಕೇಳಬೇಕಾಗಿದೆ. ಕೈಲಾಗದ ಮುಖ್ಯಮಂತ್ರಿಯವರನ್ನು ಇಟ್ಟುಕೊಂಡು ಕೊರೊನಾ ನಿಯಂತ್ರಣ ಮಾಡುವುದಾದರೂ ಹೇಗೆ ಪ್ರಧಾನಿಗಳೇ? ಎಂದು ಕೇಳಿದ್ದಾರೆ.


from India & World News in Kannada | VK Polls https://ift.tt/3tNYR1j

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...