‘ವೀಕೆಂಡ್‌ ಕರ್ಫ್ಯೂ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ’; ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು: ಹಾಲಿ ಮಾರ್ಗಸೂಚಿಯಂತೆ ಸದ್ಯಕ್ಕೆ ವೀಕೆಂಡ್‌ ಕರ್ಫ್ಯೂ ಮಾತ್ರ ಜಾರಿಯಲ್ಲಿರುತ್ತದೆ. ಇದರ ವಿಸ್ತರಣೆಯ ಕುರಿತ ಊಹಾಪೋಹಕ್ಕೆ ವ್ಯಾಖ್ಯಾನ ಮಾಡಲು ಬಯಸುವುದಿಲ್ಲ ಎಂದು ಗೃಹ ಸಚಿವ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿ, ವೀಕೆಂಡ್‌ ಕರ್ಫ್ಯೂ ವಿಸ್ತರಣೆ ಬಗ್ಗೆ ಇದುವರೆಗೆ ಯಾವುದೇ ಚರ್ಚೆಯಾಗಿಲ್ಲ. ಸದ್ಯದ ಮಾರ್ಗಸೂಚಿ ಅನುಸಾರ ಯಥಾಸ್ಥಿತಿ ಮುಂದುವರಿಯಲಿದೆ. ವೀಕೆಂಡ್‌ ಕರ್ಫ್ಯೂ ರಾಜ್ಯಾದ್ಯಂತ ಯಶಸ್ವಿಯಾಗಿದೆ. ಇದಕ್ಕೆ ಜನರೂ ಸಹಕರಿಸಿದ್ದಾರೆ ಎಂದರು. ಕೇಂದ್ರ ಸರಕಾರ ಹೆಚ್ಚುವರಿ ಆಮ್ಲಜನಕ ನೀಡಲು ಒಪ್ಪಿದೆ. 800 ಟನ್‌ ಆಮ್ಲಜನಕ ಹಂಚಿಕೆ ಮಾಡಿದೆ. ಮುಂಬರುವ ದಿನಗಳಲ್ಲಿ ಎಲ್ಲರಿಗೂ ಆಮ್ಲಜನಕ ಲಭ್ಯವಾಗಲಿದೆ. ಕೇಂದ್ರ ಸರಕಾರ 1.22 ಲಕ್ಷ ರೆಮ್‌ಡೆಸಿವಿರ್‌ ಪೂರೈಕೆ ಮಾಡಲಿದೆ. ಇದಕ್ಕಾಗಿ ಕೇಂದ್ರಕ್ಕೆ ಧನ್ಯವಾದ ಹೇಳುತ್ತೇನೆ. ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್‌ ಲಸಿಕೆಯ ಮೊದಲ ಡೋಸ್‌ ನೀಡಲಾಗುವುದು. 45 ವರ್ಷ ದಾಟಿದವರಿಗೆ 2ನೇ ಡೋಸ್‌ ನೀಡಲಾಗುವುದು. ಲಸಿಕೆ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು.


from India & World News in Kannada | VK Polls https://ift.tt/3aE97Bv

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...