ಸಿ.ಡಿ ಸಂತ್ರಸ್ತೆ ಪರ ವಕೀಲ ಮಂಜುನಾಥ್‌ಗೆ ಕಂಟಕ; ವಿಚಾರಣೆ ಮುಗಿಯುವವರೆಗೆ ವೃತ್ತಿಯಿಂದ ಸಸ್ಪೆಂಡ್‌!

ಬೆಂಗಳೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್‌ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವ ಸಿಡಿ ಸಂತ್ರಸ್ತೆ ಪರ ವಕೀಲರಾದ ಕೆ.ಎನ್‌. ಜಗದೀಶ್‌ ಕುಮಾರ್‌ ಹಾಗೂ ಮಂಜುನಾಥ್‌ಗೆ ಸಂಕಷ್ಟ ಎದುರಾಗಿದೆ. ವಕೀಲ ಮಂಜುನಾಥ್‌ ಸನ್ನದನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲು ಪರಿಷತ್‌ ಆದೇಶಿಸಿದೆ. ವಿಚಾರಣೆ ಮುಗಿಯುವ ತನಕ ವಕೀಲಿ ವೃತ್ತಿ ಮಾಡದಂತೆ ಸೂಚಿಸಿದೆ. ‘ಪರಿಷತ್ತಿನ ಬಗ್ಗೆ ಮಂಜುನಾಥ್‌ ತಲೆಬುಡವಿಲ್ಲದ ಆರೋಪ ಮಾಡಿದ್ದಾರೆ. ಹಾಗಾಗಿ, ಪರಿಷತ್‌ ಸರ್ವಸದಸ್ಯರ ಸಭೆ ನಡೆಸಿ ಮಂಜುನಾಥ್‌ ಸನ್ನದನ್ನು ಅಮಾನತು ಮಾಡಲು ನಿರ್ಣಯಿಸಲಾಗಿದೆ. ಅಂತೆಯೇ ಅವರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಜತೆಗೆ ವಕೀಲ ಕೆ.ಎನ್‌. ಜಗದೀಶ್‌ ಕುಮಾರ್‌ ಸದಸ್ಯತ್ವ ಮಾಹಿತಿ ಹಾಗೂ ಶಿಸ್ತು ಕ್ರಮ ಜರುಗಿಸುವ ಬಗ್ಗೆ ದಿಲ್ಲಿ ವಕೀಲರ ಪರಿಷತ್ತಿಗೆ ಪತ್ರ ಬರೆಯಲಾಗಿದೆ’ ಎಂದು ಕೆಎಸ್‌ ಬಿಸಿ ಅಧ್ಯಕ್ಷ ಶ್ರೀನಿವಾಸ್‌ ಬಾಬು ತಿಳಿಸಿದ್ದಾರೆ. ರಾಜ್ಯ ವಕೀಲರ ಪರಿಷತ್ತಿನಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ಜತೆಗೆ ಪರಿಷತ್ತಿನ ಆದಾಯ, ಖರ್ಚು ವೆಚ್ಚಗಳಿಗೆ ಸಂಬಂಧಿಸಿದಂತೆ ಪ್ರತಿವರ್ಷದ ಆಡಿಟ್‌ ವರದಿ ನಮ್ಮಲ್ಲಿದೆ. ಅಗತ್ಯವಿದ್ದರೆ ಬಂದು ಕೇಳಿ ಮಾಹಿತಿ ಪಡೆಯಬಹುದು, ಎಲ್ಲ ದಾಖಲೆ ನೀಡಲು ಸಾವು ಸಿದ್ಧ.ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಮನಬಂದಂತೆ ಹೇಳಿಕೆ ನೀಡಿ ಪರಿಷತ್ತಿನ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಹಾಗಾಗಿ, ಸನ್ನದು ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ. ಮತ್ತೊಬ್ಬ ವಕೀಲರಾದ ಜಗದೀಶ್‌ ರಾಜ್ಯ ವಕೀಲರ ಪರಿಷತ್ತಿನಲ್ಲಿ ನೋಂದಾಯಿಸಿ ಕೊಂಡಿಲ್ಲವೆಂಬ ಮಾಹಿತಿ ಬಹಿರಂಗವಾಗಿತ್ತು. ಈ ಹಿನ್ನೆಲೆಯಲ್ಲಿ ಜಗದೀಶ್‌ ಹಾಗೂ ಮಂಜುನಾಥ್‌ ಫೇಸ್‌ ಬುಕ್‌ ಲೈವ್‌ನಲ್ಲಿ ರಾಜ್ಯ ವಕೀಲರ ಪರಿಷತ್ತಿನ ಕುರಿತು ಆರೋಪಗಳನ್ನು ಮಾಡಿ, ಪರಿಷತ್‌ ಅವ್ಯವಹಾರಗಳನ್ನು ಬಯಲಿಗೆಳೆಯುವುದಾಗಿ ಸವಾಲು ಹಾಕಿದ್ದರು. ರಾಜ್ಯ ವಕೀಲರ ಪರಿಷತ್ತಿನಲ್ಲಿ ನಕಲಿ ಸ್ಟಾಂಪ್‌ ಜಾಲವಿದ್ದು, ಅದು ತೆಲಗಿ ಪ್ರಕರಣವನ್ನೂ ಮೀರಿಸುತ್ತದೆ. ವಕೀಲರ ಕಲ್ಯಾಣ ನಿಧಿ ದುರ್ಬಳಕೆ ಆಗುತ್ತಿದೆ. ಪರಿಷತ್‌ ಆದಾಯಕ್ಕೆ ಲೆಕ್ಕವೇ ಇಲ್ಲ. ಪರಿಷತ್‌ನ ಸದಸ್ಯರು ಐಷಾರಾಮಿ ಕಾರುಗಳಲ್ಲಿ ಓಡಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.


from India & World News in Kannada | VK Polls https://ift.tt/39FYlub

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...