ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು: ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ಸಾರ್ವಜನಿಕ ಪ್ರದೇಶಗಳಲ್ಲಿ ಅಕ್ರಮವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡುವ ಸಂಬಂಧ ಸುಪ್ರೀಂಕೋರ್ಟ್‌ ನೀಡಿರುವ ಆದೇಶ ಪಾಲನೆ ಮಾಡಿರುವ ಕುರಿತು ಪ್ರಮಾಣಪತ್ರ ಸಲ್ಲಿಸಲು ಹೈಕೋರ್ಟ್‌ ಸರಕಾರದ ಮುಖ್ಯ ಕಾರ್ಯದರ್ಶಿಗೆ ಶನಿವಾರ ನಿರ್ದೇಶನ ನೀಡಿದೆ. ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಸಂಬಂಧ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಕುರಿತು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ರಸ್ತೆ, ಉದ್ಯಾನವನ ಸೇರಿ ಸಾರ್ವಜನಿಕ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು 6 ವಾರಗಳಲ್ಲಿ ತೆರವು ಮಾಡುವಂತೆ 2009ರ ಫೆ. 16ರಂದು ಸುಪ್ರೀಂ ಕೋರ್ಟ್‌ ರಾಜ್ಯ ಸರಕಾರಗಳಿಗೆ ನಿರ್ದೇಶನ ನೀಡಿತ್ತು. ಈ ನಿರ್ದೇಶನದ ಅನುಸಾರ ಸರಕಾರ ಕೈಗೊಂಡಿರುವ ಕ್ರಮಗಳು ಹಾಗೂ ಕೈಗೊಳ್ಳಲಿರುವ ಕ್ರಮಗಳ ಕುರಿತು ಮುಖ್ಯ ಕಾರ್ಯದರ್ಶಿ ಮುಂದಿನ ಆರು ವಾರಗಳಲ್ಲಿ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಆದೇಶಿಸಿತು. ಅನಧಿಕೃತವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳ ತೆರವಿಗೆ ತಾಲೂಕು ಮತ್ತು ಜಿಲ್ಲಾ ಹಂತದಲ್ಲಿ ತಂಡ ರಚಿಸಬೇಕು. ಹಾಗೆಯೇ, ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಸಂಬಂಧ ವ್ಯಾಪಕ ಪ್ರಚಾರ ನೀಡಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಜೂ.18ಕ್ಕೆ ಮುಂದೂಡಿತು.


from India & World News in Kannada | VK Polls https://ift.tt/3glhGFg

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...