ಕೋವಿಡ್‌ ಎರಡನೇ ಅಲೆ ಆತಂಕ: ಜಿಲ್ಲಾಧಿಕಾರಿಗಳೊಂದಿಗೆ ಸಚಿವರ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡಲೇ ಅಲೆಯ ಆತಂಕ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಶನಿವಾರ ಸಚಿವರು ಮಹತ್ವದ ಸಭೆ ನಡೆಸಲಿದ್ದಾರೆ. ಕಂದಾಯ ಸಚಿವ ಆರ್‌. ಅಶೋಕ್ , ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಕೋವಿಡ್-19 ಎರಡನೇ ಅಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ಕೈಗೊಂಡಿರುವ ಕ್ರಮಗಳ ಕುರಿತು ಇಲಾಖಾ ಮುಖ್ಯಸ್ಥರು ಹಾಗೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಯಲಿದೆ. ಶನಿವಾರ ಬೆಳಿಗ್ಗೆ 11-00 ಗಂಟೆಗೆ ವಿಕಾಸಸೌಧ ಕೊಠಡಿ ಸಂಖ್ಯೆ 122 ರಲ್ಲಿ ಸಭೆ ನಡೆಯಲಿದ್ದು ಕೋವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಸದ್ಯದ ಸ್ಥಿತಿಗತಿಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಈಗಾಗಲೇ ಕೋವಿಡ್‌ ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆ ಮಾಡಿದ್ದು ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಧಾರ್ಮಿಕ ಸಮಾರಂಭಗಳು ಹಾಗೂ ಮದುವೆ ಸಮಾರಂಭಗಳಿಗೆ ಹೆಚ್ಚಿನ ಜನ ಸೇರದಂತೆ ಕಡಿವಾಣ ಹಾಕಿದೆ. ಆದರೆ ಇದನ್ನು ಜಿಲ್ಲಾಮಟ್ಟದಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ಆಗಲಿದೆ. ಸಚಿವರು ಕೆಲವೊಂದು ಸೂಚನೆಗಳನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನೀಡಲಿದ್ದಾರೆ. ರಾಜ್ಯದಲ್ಲಿ ಕೋವಿಡ್‌ ತೀವ್ರ ಸ್ವರೂಪದಲ್ಲಿ ಏರಿಕೆ ಆಗುತ್ತಿದ್ದು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಇದೀಗ ಎರಡನೇ ಬಾರಿ ಕೋವಿಡ್‌ ಸೋಂಕು ತಗುಲಿದೆ. ಸದ್ಯ ಅವರು ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಅನುಪಸ್ಥಿತಿಯಲ್ಲಿ ಹಿರಿಯ ಸಚಿವರು ಕೋವಿಡ್‌ ನಿಯಂತ್ರಣ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಜೊತೆಗೆ ಶನಿವಾರ ಮಹತ್ವದ ಸಭೆ ನಡೆಸಲಿದ್ದಾರೆ.


from India & World News in Kannada | VK Polls https://ift.tt/2OUmMwI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...