ಬೆಂಗಳೂರು: ಜಿಲ್ಲಾ ಕೇಂದ್ರಗಳಲ್ಲಿ ಕನಿಷ್ಠ ವೈದ್ಯಕೀಯ ಸೌಲಭ್ಯಗಳಿಲ್ಲದೆ ಜನ ಪರದಾಡುತ್ತಿದ್ದಾರೆ. ಈ ಬಗ್ಗೆ ಗಮನ ಹರಿಸಿ ಎಂದು ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ. ವೈದ್ಯಕೀಯ ವ್ಯವಸ್ಥೆ ಹಾಗೂ ಸೋಂಕು ನಿಯಂತ್ರಣದ ಬಗ್ಗೆ ಕೇವಲ ಬೆಂಗಳೂರು ಕೇಂದ್ರಿತವಾಗಿ ಮಾತ್ರ ಚಿಂತಿಸದೆ ರಾಜ್ಯಾದ್ಯಂತ ಜಿಲ್ಲೆ, ತಾಲೂಕುಗಳನ್ನೂ ಗಮನದಲ್ಲಿಟ್ಟುಕೊಂಡು ಕಾರ್ಯ ನಿರ್ವಹಿಸುವುದು ಅಗತ್ಯ ಎಂದಿದೆ. ಜಿಲ್ಲಾ ಕೇಂದ್ರಗಳಲ್ಲಿಯೂ ಕನಿಷ್ಠ ವೈದ್ಯಕೀಯ ಸೌಲಭ್ಯಗಳು ಇಲ್ಲದೆ ಜನ ಪರದಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹಾಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗಮನ ಹರಿಸಬೇಕು ಎಂದು ಒತ್ತಾಯಿಸಿದೆ. ರಾಜ್ಯಾದ್ಯಂತ ಕೋವಿಡ್ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿದ್ದು ಸೋಂಕು ನಿಯಂತ್ರಣ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ವಾರಾಂತ್ಯದ ಕರ್ಪ್ಯೂ ಹಾಗೂ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಇನ್ನು ಬೆಂಗಳೂರು ನಗರದಲ್ಲಿ ಕೋವಿಡ್ ಸಂಖ್ಯೆ ಮಿತಿ ಮೀರಿ ಏರಿಕೆ ಆಗುತ್ತಿದೆ. ಸಾವಿನ ಪ್ರಮಾಣದಲ್ಲಿ ಕೂಡಾ ಏರಿಕೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ನಗರಕ್ಕೆ ಹೆಚ್ಚಿನ ಆದ್ಯತೆಯನ್ನು ಸರ್ಕಾರ ನೀಡುತ್ತಿದೆ. ಈ ಕಾರಣಕ್ಕಾಗಿ ಕೇವಲ ಬೆಂಗಳೂರಿಗೆ ಮಾತ್ರ ಆದ್ಯತೆ ನೀಡದಿರಿ, ರಾಜ್ಯದ ಇತರ ಜಿಲ್ಲಾ ಕೇಂದ್ರಗಳನ್ನು ಪರಿಗಣಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಿ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಮನವಿ ಮಾಡಿದೆ.
from India & World News in Kannada | VK Polls https://ift.tt/3aKaqiH