ಕೊರೊನಾ ಪೇ ಚರ್ಚಾ ಸಾಕು, ಲಸಿಕೆ ಉಚಿತವಾಗಿ ಬೇಕು: ಕೇಂದ್ರಕ್ಕೆ ರಾಹುಲ್ ಗಾಂಧಿ ಒತ್ತಾಯ!

ಹೊಸದಿಲ್ಲಿ: ಎರಡನೇ ಅಲೆ ಕುರಿತು ಮತ್ತೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ , ಕೊರೊನಾ ಬಗ್ಗೆ ಚರ್ಚೆ ಮಾಡುವುದನ್ನು ನಿಲ್ಲಿಸಿ ದೇಶದ ಎಲ್ಲಾ ನಾಗರಿಕರಿಗೆ ಉಚಿತವಾಗಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಕೊರೊನಾ ವೈರಸ್ ಅಲೆ ಕುರಿತು ಚರ್ಚೆ ಮಾಡಿದ್ದು ಸಾಕು. ದೇಶದ ಎಲ್ಲಾ ನಾಗರಿಕರಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡುವತ್ತ ಸರ್ಕಾರ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ. ಭಾರತವನ್ನು ಬಿಜೆಪಿ ವ್ಯವಸ್ಥೆಯ ಬಲಿಪಶುವನ್ನಾಗಿ ಮಾಡಬೇಡಿ ಎಂದು ಗುಡುಗಿರುವ ರಾಹುಲ್ ಗಾಂಧಿ, ಕೊರೊನಾ ಅಲೆ ತಡೆಗೆ ಇನ್ನಾದರೂ ಕ್ರಮ ಕೈಗೊಳ್ಳಿ ಎಂದು ಮೋದಿ ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ. ದೇಶದ ಎಲ್ಲಾ ನಾಗರಿಕರಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡಬೇಕು. ಇದರಲ್ಲಿ ಚರ್ಚೆ ಮಾಡುವಂತದ್ದೇನಿದೆ? ಎಲ್ಲಾ ಚರ್ಚೆಯನ್ನು ನಿಲ್ಲಿಸಿ ಉಚಿತ ಲಸಿಕೆ ನೀಡುವತ್ತ ಕಾರ್ಯೋನ್ಮುಖರಾಗಿ ಎಂದು ರಾಹುಲ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕೊರೊನಾ ಲಸಿಕೆ ದರ ಕುರಿತು ದೇಶಾದ್ಯಂತ ಚರ್ಚೆಯಾಗುತ್ತಿದೆ. ಪ್ರತಿ ಡೋಸ್ ದರ ಕಡಿಮೆ ಮಾಡುವಂತೆ ಲಸಿಕೆ ಉತ್ಪಾದನೆ ಸಂಸ್ಥೆಗಳಿಗೆ ಮನವಿಯನ್ನೂ ಮಾಡಲಾಗಿದೆ. ಈ ಮಧ್ಯೆಯೇ ಉಚಿತವಾಗಿ ಲಸಿಕೆ ನೀಡುವಂತೆ ರಾಹುಲ್ ಗಾಂಧಿ ಆಗ್ರಹಿಸಿರುವುದು ಗಮನ ಸೆಳೆದಿದೆ. ಈಗಾಗಲೇ ದೆಹಲಿಯ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತವಾಗಿ ಲಸಿಕೆ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಕರ್ನಾಟಕದಲ್ಲೂ ಉಚಿತ ಲಸಿಕೆಗಾಗಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.


from India & World News in Kannada | VK Polls https://ift.tt/3dRI4VC

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...