ಬೆಂಗಳೂರು: ಸಾರಸ್ವತ ಲೋಕದಲ್ಲಿ ಜಿ.ವಿ ಎಂದೇ ಪ್ರಸಿದ್ಧರಾಗಿದ್ದ , ಶಬ್ಧ ಬ್ರಹ್ಮ ಪದ್ಮಶ್ರೀ ಪ್ರೊ.ಜಿ ವೆಂಕಟಸುಬ್ಬಯ್ಯ ಅವರು ನಿಧನಕ್ಕೆ ಮಾಜಿ ಸಿಎಂ ಕಂಬನಿ ಮಿಡಿದಿದ್ದಾರೆ. ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ನಾಡಿನ ಖ್ಯಾತ ಸಂಶೋಧಕ, ನಿಘಂಟು ತಜ್ಞ ಫ್ರೊ. ಜಿ. ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಕೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ಶ್ರೀಯುತರದು. ನಾಡು-ನುಡಿಗೆ ಸಲ್ಲಿಸಿದ ಸೇವೆ ಅನನ್ಯವಾದದ್ದು ಎಂದು ಸ್ಮರಿಸಿದ್ದಾರೆ. ಅಲ್ಲದೇ ನಾಡು-ನುಡಿಯ ಶ್ರೇಷ್ಠ ವಿದ್ವಾಂಸಕನನ್ನು ರಾಜ್ಯ ಕಳೆದುಕೊಂಡಂತಾಗಿದೆ ಎಂದಿರುವ ಎಚ್‌ಡಿ ಕುಮಾರಸ್ವಾಮಿ, ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
from India & World News in Kannada | VK Polls https://ift.tt/3dqvDQi