ವಾಷಿಂಗ್ಟನ್: ಭಾರತದಲ್ಲಿ ಆತಂಕ ಸೃಷ್ಟಿಸಿರುವ ಮಾರಕ ಎರಡನೇ ಅಲೆ ಕುರಿತು ಕೂಡ ಚಿಂತಿಸತೊಡಗಿದೆ. ಅಲ್ಲದೇ ಯೋಜನೆಯನ್ನು ತಾತ್ಕಾಲಿಕವಾಗಿ ಮುಂದೂಡುವುದು ಒಳಿತು ಎಂದು ತನ್ನ ನಾಗರಿಕರಿಗೆ ಸಲಹೆ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ಅಮೆರಿಕದ ಸಾರ್ವಜನಿಕ ಆರೋಗ್ಯ ಸಂಸ್ಥೆ, ಸದ್ಯದ ಪರಿಸ್ಥಿತಿಯಲ್ಲಿ ಅಮೆರಿಕದ ನಾಗರಿಕರು ತಮ್ಮ ಭಾರತ ಪ್ರವಾಸ ಯೋಜನೆಯನ್ನು ರದ್ದುಪಡಿಸಿದರೆ ಉತ್ತಮ ಎಂದು ಹೇಳಿದೆ. ಅಮೆರಿಕದಲ್ಲಿ ಲಸಿಕಾ ಅಭಿಯಾನ ಯಶಸ್ವಿಯಾಗಿ ಸಾಗುತ್ತಿದ್ದು, ಸಂಪೂರ್ಣವಾಗಿ ಲಸಿಕೆ ಪಡೆದವರೂ ಕೂಡ ಭಾರತ ಪ್ರವಾಸವನ್ನು ರದ್ದುಪಡಿಸಿದರೆ ಉತ್ತಮ ಎಂದು ಅಮೆರಿಕದ ಸಾರ್ವಜನಿಕ ಆರೋಗ್ಯ ಸಂಸ್ಥೆ ಸಲಹೆ ನೀಡಿದೆ. ಬಾರತದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚುತ್ತಿದ್ದು, ಈ ಸಮಯದಲ್ಲಿ ಭಾರತ ಪ್ರವಾಸ ಕೈಗೊಳ್ಳುವುದು ಸರಿಯಾದ ನಿರ್ಧಾರವಲ್ಲ ಎಂದು ಸಿಡಿಸಿ ಆರೋಗ್ಯ ಸಂಸ್ಥೆ ಅಭಿಪ್ರಾಯಪಟ್ಟಿದೆ. ಒಂದು ವೇಳೆ ಭಾರತ ಪ್ರವಾಸ ಅನಿವಾರ್ಯ ಎಂದಾದರೆ ಕೊರೊನಾ ನಿಯಮಾವಳಿಗಳನ್ನು ತಪ್ಪದೇ ಪಾಲಿಸಿ ಎಂದೂ ಸಿಡಿಸಿ ತನ್ನ ನಾಗರಿಕರಲ್ಲಿ ಮನವಿ ಮಾಡಿದೆ. ಮಾಸ್ಕ್ ಧಾರಣೆ, ಸಾರ್ವಜನಿಕ ಸ್ಥಳಗಳಲ್ಲಿ ನಿರ್ದಿಷ್ಟ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಕೊರೊನಾ ನಿಯಮಗಳನ್ನು ಪಾಲಿಸಿ ಎಂದು ಸಂಸ್ಥೆ ಮನವಿ ಮಾಡಿದೆ. ಈಗಾಗಲೇ ಭಾರತವನ್ನು ಕೆಂಪು ಪಟ್ಟಿಗೆ ಸೇರಿಸಿರುವ ಬ್ರಿಟನ್, ಭಾರತದಿಂದ ಬ್ರಿಟನ್‌ಗೆ ಬರುವ ಪ್ರಯಾಣಿಕರ ಮೇಲೆ ನಿರ್ಬಂಧ ಹೇರಿದೆ. ಇದೀಗ ಅಮೆರಿಕ ಕೂಡ ತನ್ನ ನಾಗರಿಕರಿಗೆ ಭಾರತ ಪ್ರವಾಸ ಕೈಗೊಳ್ಳದಿರುವುದು ಉತ್ತಮ ಎಂದು ಹೇಳಿದೆ.
from India & World News in Kannada | VK Polls https://ift.tt/3v7suuu