ಖಾಸಗಿ ಆಸ್ಪತ್ರೆಗಳು ಅಸಹಕಾರ ತೋರಿದರೆ ಕಠಿಣ ಕ್ರಮ: ಜಗದೀಶ್‌ ಶೆಟ್ಟರ್ ಎಚ್ಚರಿಕೆ

ಹುಬ್ಬಳ್ಳಿ: ಕೋವಿಡ್-19 ಸಂದರ್ಭದಲ್ಲಿ ಯಾವುದೇ ತುರ್ತು ಪರಿಸ್ಥಿತಿಯಲ್ಲಿಯೂ ಕೂಡ ಜಿಲ್ಲಾಡಳಿತ ಕೆಲಸ ಮಾಡಲು ಸಿದ್ಧವಾಗಿದೆ. ಖಾಸಗಿ ಆಸ್ಪತ್ರೆಗಳು ಅಸಹಕಾರ ತೋರಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ಯಾವುದೇ ತುರ್ತು ಪರಿಸ್ಥಿತಿ ಇದ್ದರೂ ಜಿಲ್ಲಾಡಳಿತ 24×7 ಕೆಲಸ‌ ಮಾಡುತ್ತಿದೆ. ಜಿಲ್ಲೆಯಲ್ಲಿ ಎರಡು ಸಾವಿರ ಬೆಡ್ ಸಂಖ್ಯೆ ಹೆಚ್ಚಿಸಲು ಕ್ರಮ‌ ಕೈಗೊಳ್ಳಲಾಗಿದೆ. ಅಲ್ಲದೇ 2000 ಆಕ್ಸಿಜನ್ ಬೆಡ್ ಸಿದ್ಧ ಪಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಕಿಮ್ಸ್‌ನಲ್ಲಿರುವ ಬೆಡ್‌ಗಳ ಸಂಖ್ಯೆಯನ್ನು 500ರಿಂದ ಸಾವಿರಕ್ಕೆ ಹೆಚ್ಚಳ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ಬಾರಿ ಖಾಸಗಿ ಆಸ್ಪತ್ರೆಗಳು ತೋರಿದ ಅಸಹಕಾರ ಈ ಬಾರಿ ಇಲ್ಲ. ಧಾರವಾಡ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಹುಬ್ಬಳ್ಳಿ-ಧಾರವಾಡದಲ್ಲಿ ವೆಂಟಿಲೇಟರ್ ಕೊರೆತಯಿಲ್ಲ ಎಂದು ಹೇಳಿದ ಜಗದೀಶ್‌ ಶೆಟ್ಟರ್‌, ಖಾಸಗಿ ಆಸ್ಪತ್ರೆಗಳು‌ ಅಸಹಕಾರ ತೋರಿದರೆ ಕಠಿಣ ಕ್ರಮ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.


from India & World News in Kannada | VK Polls https://ift.tt/2S1tG4D

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...