ಕೋವಿಡ್‌ ಕರ್ಫ್ಯೂ ಎಫೆಕ್ಟ್: ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಪರಿಶೀಲಿಸಿದ ಲಕ್ಷ್ಮಣ ಸವದಿ

ಬೆಂಗಳೂರು: ಕೋವಿಡ್‌ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ 14 ದಿನಗಳ ಲಾಕ್‌ಡೌನ್‌ ಜಾರಿಗೊಂಡಿದ್ದು ಈ ನಿಟ್ಟಿನಲ್ಲಿ ಬೆಂಗಳೂರಿನಿಂದ ತಮ್ಮ ಊರುಗಳಿಗೆ ತೆರಳುತ್ತಿರುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಮೆಜೆಸ್ಟಿಕ್‌ ಕೆ.ಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ತೆರಳಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಕರ್ಫ್ಯೂ ಹಿನ್ನೆಲೆಯಲ್ಲಿ ಬೆಂಗಳೂರಿಂದ ಹೊರ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಇಂದು ಗಮನಾರ್ಹ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಕಾರಣಕ್ಕಾಗಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಮಾಡಿದೆ. ಒಟ್ಟು 12,000 ಬಸ್‌ಗಳ ವ್ಯವಸ್ಥೆಯನ್ನು ಮಾಡಿದ್ದು ಕೋವಿಡ್ ಮುನ್ನೆಚ್ಚರಿಕೆ ವಹಿಸುವಂತೆಯೂ ಸೂಚನೆ ನೀಡಲಾಗಿದೆ. ಈ ವ್ಯವಸ್ಥೆ ಹೇಗಿದೆ ಎಂದು ಪರಿಶೀಲನೆ ನಡೆಸಲು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಬೆಂಗಳೂರಿನ ಮೆಜೆಸ್ಟಿಕ್ ನಿಲ್ದಾಣಕ್ಕೆ ಖುದ್ದಾಗಿ ತೆರಳಿ ಹೆಚ್ಚುವರಿ ಬಸ್ಸುಗಳ ಸಮರ್ಪಕ ವ್ಯವಸ್ಥೆಯನ್ನು ಪರಿಶೀಲಿಸಿದರು. ಕೆ.ಎಸ್. ಆರ್. ಟಿ. ಸಿ. ಯ ವ್ಯವಸ್ಥಾಪಕ ನಿರ್ದೇಶಕರಾದ ಶಿವಯೋಗಿ ಕಳಸದ ಅವರು ಕೂಡ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಭೇಟಿಕೊಟ್ಟು ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು. ರಾಜ್ಯಾದ್ಯಂತ ಬುಧವಾರ ರಾತ್ರಿ 9 ರಿಂದ ಕೋವಿಡ್‌ ಕರ್ಪ್ಯೂ ಜಾರಿಗೊಳ್ಳಲಿದೆ. ಒಟ್ಟು 14 ದಿನಗಳ ಕಾಲ ಈ ಕರ್ಫ್ಯೂ ಜಾರಿಯಲ್ಲಿರುತ್ತದೆ.


from India & World News in Kannada | VK Polls https://ift.tt/3tZE0Iy

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...