ಕೋವಿಡ್‌ ಆತಂಕ: ಆರೋಗ್ಯ ತಜ್ಞರ ಸಮಿತಿಯ ಅಭಿಪ್ರಾಯವನ್ನು ಸಾರ್ವಜನಿಕವಾಗಿ ಪ್ರಕಟಿಸಿ, ಪ್ರಿಯಾಂಕ್ ಖರ್ಗೆ ಆಗ್ರಹ

ಬೆಂಗಳೂರು: ಕೋವಿಡ್‌ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡುವ ಆರೋಗ್ಯ ತಜ್ಞರ ಸಮಿತಿಯ ಅಭಿಪ್ರಾಯವನ್ನು ರಾಜ್ಯ ಸರ್ಕಾರವು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್‌ ಖರ್ಗೆ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಪ್ರಿಯಾಂಕ್‌ ಖರ್ಗೆ ಈ ಆಗ್ರಹವನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ. ರಾಜ್ಯದ ಆರೋಗ್ಯ ಮೂಲಸೌಕರ್ಯಗಳ ಸ್ಥಿತಿ, ಸೋಂಕು ಹರಡುವಿಕೆಯ ತಡೆಗೆ ತೆಗೆದುಕೊಂಡಿರುವ‌ ಕ್ರಮಗಳು, ಲಸಿಕೆಗಾಗಿ ನೀಲನಕ್ಷೆ ಹಾಗೂ ಲಾಕ್‌ಡೌನ್ ಕುರಿತಾಗಿ ಅವರ ಅಭಿಪ್ರಾಯ ಏನು ? ಎಂಬುವುದನ್ನು ಸರ್ಕಾರ ಸಾರ್ವಜನಿಕರ ಮುಂದೆ ಇಡಬೇಕು ಎಂಬುವುದು ಅವರ ಆಗ್ರಹವಾಗಿದೆ. ಕೋವಿಡ್‌ ಸೋಂಕು ನಿಯಂತ್ರಣ ಕ್ರಮಗಳ ಕುರಿತಾಗಿ ಸರ್ಕಾರಕ್ಕೆ ತಾಂತ್ರಿಕ ಸಮಿತಿ ಸಲಹೆಗಳನ್ನು ನೀಡುತ್ತಿದೆ. ತಾಂತ್ರಿಕ ಸಮಿತಿಯ ಸಲಹೆ ಆಧರಿಸಿ ಸರ್ಕಾರಕ್ಕೆ ಒಂದು ನಿರ್ಧಾರವನ್ನು ಕೈಗೊಳ್ಳುತ್ತದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆ ಏನು ಎಂಬುವುದನ್ನು ಸರ್ಕಾರ ತಿಳಿಸಿಲ್ಲ. ಈ ನಿಟ್ಟಿನಲ್ಲಿ ಪ್ರಿಯಾಂಕ್‌ ಖರ್ಗೆ ಈ ಆಗ್ರಹವನ್ನು ಮಾಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಕೋವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕೆಲವೊಂದು ಕಠಿಣ ನಿಯಮಗಳನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಸೋಮವಾರ ಮಧ್ಯಾಹ್ಮ ಮೂರು ಗಂಟೆಗೆ ಸಿಎಂ ಬಿಎಸ್‌ ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನ ಸಚಿವರ ಮಹತ್ವದ ಸಭೆ ನಡೆಯಲಿದೆ.


from India & World News in Kannada | VK Polls https://ift.tt/2QyoNPG

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...