ಕೋವಿಡ್ ಲಸಿಕೆ ಕೊರತೆ: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಗರಂ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಲಸಿಕೆಯ ಕೊರತೆ ಇಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್‌ ಹೇಳಿದರೆ ಇದನ್ನು ನಿರಾಕರಿಸಿದೆ. ನಿಮ್ಮ ಸುಳ್ಳುಗಳು ವಾಸ್ತವದ ಸಮಸ್ಯೆಯನ್ನು ಬಗೆಹರಿಸಲಾರವು ಎಂದು ಪತ್ರಕಾ ವರದಿಗಳನ್ನು ಉಲ್ಲೇಖಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ರಾಜ್ಯದಲ್ಲಿ ಲಸಿಕೆಗಳ ಕೊರತೆಯೇ ಇಲ್ಲ ಎಂದು ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳುತ್ತಿತ್ತು ಸರ್ಕಾರ. ರಾಜ್ಯದಲ್ಲಿ ಲಸಿಕೆ ನೀಡಿಕೆ ಮಂದಗತಿಯಲ್ಲಿದೆ. ಕೆಂದ್ರದಿಂದ ಲಸಿಕೆ ಹಂಚಿಕೆಯಲ್ಲೂ ತಾರತಮ್ಯವಾಗಿದೆ. ಲಸಿಕೆ ಕೊರತೆ ಬಗ್ಗೆ ತಲೆ ಕೆಡಿಸಿಕೊಳ್ಳದ ಸರ್ಕಾರ ಎಂದಿರುವ ಕಾಮಗ್ರೆಸ್ ನಿಮ್ಮ ಸುಳ್ಳುಗಳು ವಾಸ್ತವದ ಸಮಸ್ಯೆಯನ್ನು ಬಗೆಹರಿಸಲಾರವು ಎಂದು ಆಕ್ರೋಶ ವ್ಯಕ್ತಪಡಿಸಿದೆ. ಇನ್ನು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಅವರು ಕೂಡಾ ಟ್ವೀಟ್ ಮಾಡಿದ್ದು, ಸಚಿವ ಡಾ! ಸುಧಾಕರ್ ರಾಜ್ಯದಲ್ಲಿ ಕೋವಿಡ್ ಲಸಿಕೆಯ ಕುರಿತು ಸುಳ್ಳುಗಳನ್ನು ಸೃಷ್ಟಿಸುವ ಪಿತಾಮಹಾರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಲಸಿಕೆ ಕೊರತೆಯಿದ್ದರೂ ಹಸಿ ಹಸಿ ಸುಳ್ಳು ಹೇಳಿಕೊಂಡು ತಿರುಗಾಡುವ ಚಾಳಿ ಸಚಿವರದ್ದು. ಸಚಿವರಿಗೆ ಜನರ ಆರೋಗ್ಯದ ಬಗ್ಗೆ ಕಾಳಜಿಯಿದ್ದರೆ ಲಭ್ಯವಿರುವ ಲಸಿಕೆಯೆಷ್ಟು?ಅಗತ್ಯವಿರುವ ಲಸಿಕೆಯೆಷ್ಟು? ಎಂಬ ನೈಜ ಮಾಹಿತಿ ನೀಡಲಿ ಎಂದು ಆಗ್ರಹಿಸಿದ್ದಾರೆ. ರಾಜ್ಯದಾದ್ಯಂತ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ನೀಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಮತ್ತೊಂದು ಕಡೆಯಲ್ಲಿ ಲಸಿಕೆಯ ಕೊರತೆ ಇಲ್ಲ ಎಂದು ಸರ್ಕಾರ ಹೇಳುತ್ತಿದೆ. ಆದರೆ ಹಲವು ಜನರು ಕೋವಿಡ್‌ ಲಸಿಕೆಯ ಮೊದಲ ಡೋಸ್‌ ಪಡೆದುಕೊಂಡು ಎರಡನೇ ಡೋಸ್‌ ಸಿಗದೆ ಪರದಾಟ ನಡೆಸುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.


from India & World News in Kannada | VK Polls https://ift.tt/32Sa4lG

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...